Breaking News

ಕೋರ್ಟ್​​ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆರೋಪಿ ಸಾವು

Spread the love

ಬೆಂಗಳೂರು, ಅಕ್ಟೋಬರ್​ 09: ವಿಚಾರಣೆಗೆ ಕರೆತಂದಿದ್ದ ವೇಳೆ ನ್ಯಾಯಾಲಯದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋ ಪ್ರಕರಣದ ಆರೋಪಿ ಸಾವನ್ನಪ್ಪಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಮೃತ ವ್ಯಕ್ತಿಯನ್ನು ಗೌತಮ್​ (35) ಎಂದು ಗುರುತಿಸಲಾಗಿದೆ.

ನಗರದ ಸಿಟಿ ಸಿವಿಲ್​ ಕೋರ್ಟ್​ಗೆ ಆರೋಪಿಯನ್ನು ಪ್ರಕರಣದ ವಿಚಾರಣೆಗೆಂದು ಪೊಲೀಸರು ಕರೆತಂದಿದ್ದರು. ಈ ವೇಳೆ ಮಹಡಿಯಿಂದ ಹಾರಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಿಲ್ಲ.ಕಳೆದ ಏಪ್ರಿಲ್​ನಲ್ಲಿ ಆರೋಪಿ ಗೌತಮ್​ ವಿರುದ್ಧ ಬೆಂಗಳೂರಿನ ಆಡುಗೋಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಡಿಎನ್​ಎ ಪರೀಕ್ಷೆ ವೇಳೆ ಮ್ಯಾಚ್​ ಆಗಿದ್ದ ಹಿನ್ನಲೆ ಆರೋಪಿ ಬಂಧಿಸಿದ್ದ ಪೊಲೀಸರು, ಆತನ ವಿರುದ್ಧ ಚಾರ್ಜ್​ಶೀಟ್​ ದಾಖಲಿಸಿದ್ದರು. ಪ್ರಕರಣ ಸಂಬಂಧ ಇಂದಿನಿಂದ ಟ್ರಯಲ್ ನಡೆಯಲಿದ್ದ ಹಿನ್ನಲೆ ಗೌತಮ್​ನನ್ನು ಕೋರ್ಟ್​ ಗೆ ಕರೆತರಲಾಗಿತ್ತು. ಕುಟುಂಬದವರು ಆರೋಪಿಯ ಭೇಟಿಗೆ ಬಂದಿದ್ದ ಕಾರಣ, ಗೌತಮ್​ ಕೈಗೆ ಹಾಕಿದ್ದ

 

ಬೇಡಿಯನ್ನ ಪೊಲೀಸರು ಕಳಚಿದ್ದರು. ಕುಟುಂಬಸ್ಥರ ಜೊತೆ ಮಾತನಾಡಿದ ಬಳಿಕ ಏಕಾಏಕಿಯಾಗಿ ನ್ಯಾಯಾಲಯದ 5ನೇ ಮಹಡಿಯಿಂದ ಗೌತಮ್​ ಜಿಗಿದಿದ್ದ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆತ ಅಂತಿಮವಾಗಿ ಉಸಿರು ಚೆಲ್ಲಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ