Breaking News

ಶಾಸಕ ಕೆ.ಸಿ.ವಿರೇಂದ್ರ ಪಪ್ಪಿಗೆ ಸೇರಿದ 50.33 ಕೋಟಿ ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿ ವಶ: ಇಡಿ

Spread the love

ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್‌ ದಂಧೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಮುಂದುವರಿಸಿದ್ದಾರೆ.

ಗುರುವಾರ ಚಳ್ಳಕೆರೆಯಲ್ಲಿ ವೀರೇಂದ್ರ ಪಪ್ಪಿಗೆ ಸೇರಿ ಎರಡು ಲಾಕರ್‌ಗಳನ್ನು ಜಪ್ತಿ ಮಾಡಿ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಿದ್ದಾರೆ. ಈ ಹಿಂದೆ 150 ಕೋಟಿ ರೂ. ಮೌಲ್ಯದ ಆಸ್ತಿ ದಾಖಲೆಗಳು ಮತ್ತು 21 ಕೆ.ಜಿ. ಚಿನ್ನಗಳನ್ನು ಆನ್‌ಲೈನ್ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಚಿತ್ರದುರ್ಗದ ಕಾಂಗ್ರೆಸ್​ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸೇರಿದ ಎರಡು ಲಾಕರ್‌ಗಳಲ್ಲಿ ಮತ್ತೆ 50.33 ಕೋಟಿ ರೂ.ಮೌಲ್ಯದ ಚಿನ್ನದ ಗಟ್ಟಿ ಇಟ್ಟಿರುವುದನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಆರೋಪಿಯನ್ನು ಕಸ್ಟಡಿಗೆ ಪಡೆದಿರುವ ಅಧಿಕಾರಿಗಳು ಗುರುವಾರ ವಿವಿಧ ಕಡೆ ನಡೆಸಿದ ಶೋಧಕಾರ್ಯಾಚರಣೆ ವೇಳೆ ಚಳ್ಳಕೆರೆಯಲ್ಲಿರುವ ಬ್ಯಾಂಕಿನ ಎರಡು ಲಾಕರ್‌ನಲ್ಲಿ 40 ಕೆ.ಜಿ. ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಸೆಪ್ಟೆಂಬರ್​ 4 ರಂದು ಇಡಿ ಅಧಿಕಾರಿಗಳು ಬೆಂಗಳೂರು, ಚಿತ್ರದುರ್ಗ ಸೇರಿದಂತೆ ವಿವಿಧ ಕಡೆ ಶೋಧ ನಡೆಸಿದ ವೇಳೆ ವೀರೇಂದ್ರ ಅವರ ಹೆಸರಿನಲ್ಲಿರುವ 9 ಬ್ಯಾಂಕ್ ಖಾತೆಗಳಿಂದ 55 ಕೋಟಿ ರೂ. ಮೊತ್ತದ ಠೇವಣಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಈಗ 40 ಕೆ.ಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ.

ಇದಕ್ಕೂ ಮೊದಲು, ಇಡಿ ಅಂದಾಜು 21 ಕೆಜಿ ಚಿನ್ನದ ಗಟ್ಟಿ, ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು, ಹಲವು ಬ್ಯಾಂಕ್ ಖಾತೆಗಳು ಮತ್ತು ದುಬಾರಿ ವಾಹನ ಸೇರಿ 103 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ವಶಪಡಿಸಿಕೊಳ್ಳಲಾದ ಮೊತ್ತ 150 ಕೋಟಿ ರೂ.ದಾಟಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ