Breaking News

ಪ್ರಧಾನಮಂತ್ರಿ ಧನ ಧಾನ್ಯ ಯೋಜನೆಗೆ ರಾಜ್ಯದ 6 ಜಿಲ್ಲೆ ಆಯ್ಕೆ: ಹಾವೇರಿಯಲ್ಲಿ ಸಂಸದ ಬೊಮ್ಮಾಯಿ ಚಾಲನೆ

Spread the love

ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯನ್ನು ಉದ್ಘಾಟನೆ ಮಾಡಿದ್ದು, ಈ ಯೋಜನೆಗೆ ದೇಶದಲ್ಲಿ 100 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಅವುಗಳಲ್ಲಿ ಕರ್ನಾಟಕದ ಆರು ಜಿಲ್ಲೆಗಳಿದ್ದು, ಅದರಲ್ಲಿ ಹಾವೇರಿಯೂ ಒಂದಾಗಿದೆ.

ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚ್ಯುವಲ್ ಮೂಲಕ ಯೋಜನೆಗೆ ಚಾಲನೆ ನೀಡಿದ್ದು, ಸಂಸದ ಬಸವರಾಜ ಬೊಮ್ಮಾಯಿ ಅವರು ಹಾವೇರಿಯ ಹನುಮನಹಟ್ಟಿಯ ಐಸಿಎಆರ್​ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ಧನ ಧಾನ್ಯ ಅಭಿಯಾನಕ್ಕೆ ಚಾಲನೆ ನೀಡಿದರು.

ರಾಜ್ಯದ ಆರು ಜಿಲ್ಲೆಗಳು ಆಯ್ಕೆ: ದೇಶದಲ್ಲಿನ ಇಳುವರಿ ಕಡಿಮೆ ಇರುವ ದೇಶದ 100 ಜಿಲ್ಲೆಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ರಾಜ್ಯದ ತುಮಕೂರು, ಚಿತ್ರದುರ್ಗ, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ ಹಾಗೂ ಹಾವೇರಿ ಜಿಲ್ಲೆಗಳು ಸೇರಿವೆ.

ಯೋಜನೆಯ ಲಾಭಗಳು: ಪ್ರಧಾನಮಂತ್ರಿ ಧನ ಧಾನ್ಯ ಅಭಿಯಾನ ಯೋಜನೆ ಅಡಿ ಕೃಷಿ ಕ್ಷೇತ್ರಕ್ಕೆ ಅಧಿಕ ಸಾಲ ಕೊಡಿಸುವುದು, ರೈತರಿಗೆ ಕೃಷಿ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಅವಶ್ಯಕತೆ ಇರುವುದಿಲ್ಲ. ಈ ಮೊದಲು ಕೃಷಿಗೆ ಸರ್ಕಾರ ಜಿಲ್ಲೆಯಲ್ಲಿ ಶೇ.14 ರಷ್ಟು ವೆಚ್ಚ ಮಾಡುತ್ತಿತ್ತು. ಈ ಯೋಜನೆ ಅನುಷ್ಠಾನದಿಂದ ಜಿಲ್ಲೆಯಲ್ಲಿ ಕೃಷಿಗೆ ಶೇ.24ರಷ್ಟು ವೆಚ್ಚ ಮಾಡಲಾಗುತ್ತದೆ. ರೈತರ ಜೀವನ ಮಟ್ಟ ಸುಧಾರಿಸುವುದು, ಸಮಗ್ರ ಕೃಷಿ ಹಾಗೂ ರೈತರ ಆರ್ಥಿಕ ಸುಧಾರಣೆಯು ಈ ಯೋಜನೆಯ ಉದ್ದೇಶ. ಈ ಯೋಜನೆಯ ಅನುಷ್ಠಾನದಿಂದ ಜಿಲ್ಲೆಯಲ್ಲಿ ಕೃಷಿ ಉತ್ಪಾದಕತೆ ಹೆಚ್ಚಾಗಲಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ