Breaking News

ಡಿಸೆಂಬರ್​ನಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ: ಯತೀಂದ್ರ ಸಿದ್ದರಾಮಯ್ಯ

Spread the love

ರಾಯಚೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಅಂತ ಹಿರಿಯ ಸಚಿವರುಗಳು ಹೇಳಿದ್ದು, ಮುಖ್ಯಮಂತ್ರಿ ಅವರು ಕೂಡ ಸೂಚ್ಯವಾಗಿ ತಿಳಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಬಹುಶಃ ಡಿಸೆಂಬರ್​ನಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ತಿಳಿಸಿದರು.

ಬಿಹಾರಕ್ಕೆ ಯಾರ‍್ಯಾರು ಎಷ್ಟೆಷ್ಟು ಕೊಡಬೇಕು ಅಂತ ನಿರ್ಧರಿಸಲು ಸಿಎಂ ಸಚಿವರ ಔತಣಕೂಟ ಕರೆದಿದ್ದಾರೆ ಎಂಬ ವಿಪಕ್ಷ ನಾಯಕ ಆರ್‌. ಅಶೋಕ್​ ಅವರ ಹೇಳಿಕೆ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷದಲ್ಲಿ ನಡೆಯೋದು ಅವರಿಗೆ ಹೇಗ್ರಿ ಗೊತ್ತಾಗುತ್ತೆ. ಅವರು ಏನಾದ್ರು ಹೇಳ್ತಾರೆ, ಅವರು ಹೇಳೋದು ನಿಜ ಆಗುತ್ತಾ ಎಂದು ತಿರುಗೇಟು ನೀಡಿದರು.

ಸಿಎಂ ಅವರು ಆಗಾಗ್ಗೆ ಔತಣಕೂಟ ಆಯೋಜಿಸುತ್ತಿರುತ್ತಾರೆ. ಎಷ್ಟೋ ಬಾರಿ ಸಿಎಲ್​​ಪಿ ಮೀಟಿಂಗ್ ವೇಳೆ ಕರೆದಿದ್ದಾರೆ, ಮನೆಗೂ ಕರೆದಿದ್ದಾರೆ. ಶಾಸಕರು, ಸಚಿವರನ್ನು ಕರೆದಿದ್ದಾರೆ. ಅದರಲ್ಲಿ ಬಿಹಾರ ಚುನಾವಣೆ ಕೂಡ ಚರ್ಚೆ ಆಗಬಹುದು. ಅದರ ಅರ್ಥ ದುಡ್ಡಿನ ವಿಚಾರ ಅಂತಲ್ಲ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಏನಿದೆ ಹಾಗೂ ಅವರವರ ಇಲಾಖೆಗಳು ಹೇಗೆ ನಡೀತಿವೆ. ಸಮಸ್ಯೆ ಇದೆಯಾ ಅನ್ನೋದನ್ನು ಕೇಳಿ, ಬಿಹಾರ ಎಲೆಕ್ಷನ್ ಬಗ್ಗೆಯೂ ಮಾತನಾಡಿರಬಹುದು ಎಂದರು.

ನವೆಂಬರ್ ತಿಂಗಳ ನಂತರ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯಾಗಿ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಶಾಸಕರ ಹೇಳಿಕೆ ಬಗ್ಗೆ ಮಾತನಾಡಿ, ನಿಜವಾಗಿ ಏನು ಮಾತುಕತೆ ನಡೆದಿದೆ ಎಂಬುದು ಯಾರಿಗೂ ತಿಳಿದಿಲ್ಲ. ಎಲ್ಲರೂ ಊಹಾಪೋಹದ ಆಧಾರದಲ್ಲಿ ಹೇಳುತ್ತಾರೆ. ನನಗೆ ಗೊತ್ತಿರೋ ಹಾಗೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿ ಪದವಿಗೆ ಅರ್ಹರು ಇರೋರು ನಮ್ಮ ಪಕ್ಷದಲ್ಲಿ ಬಹಳಷ್ಟು ಜನ ಇದ್ದಾರೆ. ಹೀಗಾಗಿ ಆಗಾಗ ಕ್ಲೇಮ್ ಮಾಡುತ್ತಾರೆ, ಅದರಲ್ಲೇನು ತಪ್ಪಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ