Breaking News

ಟೆಲಿಫೋನ್​ ಕದ್ದಾಲಿಕೆ ಆರೋಪ ಪ್ರಕರಣ: ಅಲೋಕ್​ ಕುಮಾರ್​ ವಿರುದ್ಧದ ಇಲಾಖಾವಾರು ತನಿಖೆ ರದ್ದುಪಡಿಸಿದ ಸಿಎಟಿ

Spread the love

ಬೆಂಗಳೂರು: ಟೆಲಿಫೋನ್​ ಕದ್ದಾಲಿಕೆ ಆರೋಪ ಸಂಬಂಧ ಐಪಿಎಸ್​ ಅಧಿಕಾರಿ ಅಲೋಕ್​ ಕುಮಾರ್​ ಅವರ ವಿರುದ್ಧ ಇಲಾಖಾವಾರು ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಇಂದು ರದ್ದುಪಡಿಸಿ ಆದೇಶಿಸಿದೆ. ಅಲ್ಲದೆ, ಅರ್ಜಿದಾರ ಅಲೋಕ್​ ಕುಮಾರ್ ರಿಗೆ ಸಲ್ಲಬೇಕಾದ ಎಲ್ಲ ರೀತಿಯ ಸವಲತ್ತುಗಳನ್ನು ಲಭ್ಯವಾಗುವಂತೆ ಮಾಡಬೇಕು ಎಂದು ಪೀಠ ತಿಳಿಸಿದೆ.

ಟೆಲಿಫೋನ್​ ಕದ್ದಾಲಿಕೆ ಪ್ರಕರಣ ಸಂಬಂಧ ತನ್ನ ವಿರುದ್ಧ ಇಲಾಖಾವಾರು ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಆಲೋಕ್​ ಕುಮಾರ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಅಧ್ಯಕ್ಷ ನ್ಯಾ.ರಣಜಿತ್​ ವಸಂತರಾವ್ ಮೊರೆ ಅವರಿದ್ದ ಪೀಠ ಈ ಆದೇಶ ನೀಡಿತು.

2019ರಲ್ಲಿ ನಡೆದಿದ್ದ ಕದ್ದಾಲಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಆರೋಪ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಅರ್ಜಿದಾರ ಅಲೋಕ್​ ಕುಮಾರ್​ ವಿರುದ್ಧ ಬಿ ರಿಪೋರ್ಟ್​ ಸಲ್ಲಿಸಿತ್ತು. ಅಲ್ಲದೆ, ಹೆಚ್ಚುವರಿ ಅಂತಿಮ ಪಟ್ಟಿ ಸಲ್ಲಿಸಿದ್ದು ಇಲಾಖೆಯಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿತ್ತು. ಈ ವರದಿಯನ್ವಯ ರಾಜ್ಯ ಸರ್ಕಾರ ಇಲಾಖಾವಾರು ತನಿಖೆಗೆ ಆದೇಶಿಸಿತ್ತು. ಅಲ್ಲದೆ, ಅರ್ಜಿದಾರರಿಗೆ ಸಿಗಬೇಕಾದ ಬಡ್ತಿ ಸೇರಿದಂತೆ ಇತರೆ ಸೌಲಭ್ಯಗಳಿಗೆ ತಡೆ ನೀಡಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ