Breaking News

ಮಾರಿಷಸ್‌ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ಯುವಕ ಸಾವು

Spread the love

ಸುಳ್ಯ(ದಕ್ಷಿಣ ಕನ್ನಡ): ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.

ಸುಳ್ಯದ ನಾಲ್ಕೂರು ಗ್ರಾಮದ ಹಲ್ಗುಜಿ ಜಯಲಕ್ಷ್ಮಿ ಎಂಬವರ ಪುತ್ರ ನಂದನ್ ಎಸ್.ಭಟ್ (26) ಮೃತರು. ಇವರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ನಂದನ್ ಮಾರಿಷಸ್‌ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆ್ಯಂಡ್ ಟೂರಿಸಮ್ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿ ವೀಸಾದಲ್ಲಿದ್ದ ಅವರು ಸೋಮವಾರ ಅಲ್ಲಿನ ಜಲಪಾತ ವೀಕ್ಷಣೆಗೆ ಹೋಗಿದ್ದು, ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸೋಮವಾರ ರಾತ್ರಿ ವೇಳೆಗೆ ಘಟನೆಯ ಮಾಹಿತಿ ಮನೆಯವರಿಗೆ ಸಿಕ್ಕಿದೆ.

ಮೃತದೇಹವನ್ನು ಅಲ್ಲಿನ ಸರಕಾರಿ ವ್ಯವಸ್ಥೆಗಳ ಮೂಲಕ ಹಾಗೂ ಭಾರತ ಸರಕಾರದ ಸಹಾಯದಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ಎಲ್ಲ ರೀತಿಯ ವ್ಯವಸ್ಥೆ ಮಾಡಲು ಸಂಬಂಧಿಸಿದವರಿಗೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ