Breaking News

41ನೇ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯಿಂದ 70 ಸ್ಕೇಟರ್‌ಗಳ ಆಯ್ಕೆ

Spread the love

41ನೇ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯಿಂದ 70 ಸ್ಕೇಟರ್‌ಗಳ ಆಯ್ಕೆ
ಕಾರವಾರ ಮತ್ತು ತುಮಕೂರಿನಲ್ಲಿ ನಡೆಯಲಿರುವ ಸ್ಪರ್ಧೆಸ್ಪರ್ಧಾಳುಗಳಿಗೆ ಶುಭ ಹಾರೈಕೆ
ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ 19ನೇ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ ಮತ್ತು ಆಯ್ಕೆ ಟ್ರಯಲ್ಸ್ 2025ರ ಕಾರ್ಯಕ್ರಮ ನಡೆಯಿತು.
ಈ ಆಯ್ಕೆ ಟ್ರಯಲ್ಸ್‌ನಲ್ಲಿ ಬೆಳಗಾವಿ ಜಿಲ್ಲೆಯ ಟಾಪ್ 70 ಸ್ಕೇಟರ್‌ಗಳು 41ನೇ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆಗಳು ಬೆಂಗಳೂರು, ಕಾರವಾರ ಮತ್ತು ತುಮಕೂರಿನಲ್ಲಿ ನಡೆಯಲಿವೆ.
ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಕೇಟರ್‌ಗಳನ್ನು ಶಿವಗಂಗಾ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಚಿಂಡಕ ಅವರು ಮೆಡಲ್ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸ್ಕೇಟಿಂಗ್
ತರಬೇತುದಾರರಾದ ಸೂರ್ಯಕಾಂತ್ ಹಿಂಡಲಗೇಕರ್, ಯೋಗೇಶ್ ಕುಲಕರ್ಣಿ, ವಿಶ್ವನಾಥ್ ಯಳ್ಳೂರಕರ್,, ವಿಠ್ಠಲ್ ಗಂಗಣೆ, ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ ಸ್ಕೇಟರ್‌ಗಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ