ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢವಾಗಿದೆ.
ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ 15ನೇ ವಾರ್ಡಿನ ಕಾರ್ಪೊರೇಟರ್ ಸುಮಂಗಲಾ ರಾವ್ ಅವರಿಗೆ ಇಂದು ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಸುಂಮಗಲಾ ರಾವ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಾಕಿದ್ದು, ತಮ್ಮ ಪತಿಗೂ ಪಾಸಿಟಿವ್ ಆಗಿದ್ದು ಗುಣಮುಖರಾಗುತ್ತಿದ್ದೇವೆ ಎಂದಿದ್ದಾರೆ.
https://youtu.be/ZwocKpMtUVY
ಕಳೆದ ಕೆಲ ದಿನದ ಹಿಂದೆ ಕುಂಜತ್ತಬೈಲ್‍ನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭೆಯಲ್ಲಿ ಕಾರ್ಪೊರೇಟರ್ ಭಾಗಿಯಾಗಿದ್ದರು. ಇದೇ ಸಭೆಗೆ ಬಂದಿದ್ದ ವ್ಯಕ್ತಿಯೋರ್ವನಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಈ ಹಿನ್ನಲೆಯಲ್ಲಿ ಕಳೆದ ಏಳು ದಿನಗಳಿಂದ ಕಾರ್ಪೊರೇಟರ್ ಸೆಲ್ಫ್ ಕ್ವಾರಂಟೈನ್ ಆಗಿದ್ದರು. ಇದೀಗ ಅವರ ವರದಿಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.