Breaking News

ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲ (ಅ.20) ರಾಜ್ಯದಾದ್ಯಂತ ಪ್ರತಿಭಟನೆ

Spread the love

ಬೆಳಗಾವಿ : ‘ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ

ದಾಖಲಿಸಲಾಗಿದೆ.ನಗರದಲ್ಲಿ ಭಾನುವಾರ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಮತದಾನ ನಡೆದಿತ್ತು.ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

 

ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅದನ್ನು ಆಧಾರವಾಗಿಟ್ಟುಕೊಂಡು ಸಮಾಜದ ಮುಖಂಡ ರಾಜಶೇಖರ ತಳವಾರ ಕ್ಯಾಂಪ್‌ ಠಾಣೆಗೆ ದೂರು ನೀಡಿದ್ದಾರೆ.

 

ಅಲ್ಲದೇ, ಸೋಮವಾರ (ಅ.20) ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದೂ ತಿಳಿಸಿದ್ದಾರೆ


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ