Breaking News

ಸಂಸ್ಕೃತ ಶಾಲಾ ಶಿಕ್ಷಕನಿಂದ 9 ವರ್ಷದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಆರೋಪ: ವಿಡಿಯೋ ವೈರಲ್, ಶಿಕ್ಷಕ ಪರಾರಿ, ಪೊಲೀಸರಿಂದ ತಲಾಶ್​

Spread the love

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಸಂಸ್ಕೃತ ವೇದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿರುವ ವೇದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ.

ಸೋಷಿಯಲ್​ ಮೀಡಿಯಾದಲ್ಲಿ ವಿಡಿಯೋ ವೈರಲ್: ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್​ ಆಗಿದೆ. ವೈರಲ್​ ಆದ ವಿಡಿಯೋದಲ್ಲಿ ಶಿಕ್ಷಕ ಒಂಬತ್ತು ವರ್ಷದ ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ ಕಾಲಿನಿಂದ ಒದೆಯುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಬಾಲಕ ತನ್ನ ಅಜ್ಜಿಗೆ ಕರೆ ಮಾಡಲು ಮೊಬೈಲ್ ಫೋನ್ ಬಳಸಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆ ಇತ್ತೀಚೆಗೆ ನಡೆದಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪ್ರಸಾರವಾಗಲು ಪ್ರಾರಂಭಿಸಿದ ಕೂಡಲೇ ಶಿಕ್ಷಕ ನಾಪತ್ತೆಯಾಗಿದ್ದಾನೆ. ಪೊಲೀಸರು ಶಿಕ್ಷಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ವೇದ ಶಾಲಾ ಕಾರ್ಯನಿರ್ವಾಹಕ ಅಧಿಕಾರಿ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು: ವಿಡಿಯೋ ವೈರಲ್​ ಆದ ಬಳಿಕ ಶಿಕ್ಷಕರ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಗುರು ತಿಪ್ಪೇಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಅವರು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ, ಪೊಲೀಸರು ವೀರೇಶ್ ಹಿರೇಮಠ್ ಎಂಬುವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳ ಅಡಿ ಪ್ರಕರಣ ದಾಖಲಿಸಿದ್ದಾರೆ.

ಶಿಕ್ಷಕರು ಬಾಲಕನಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಬೇರೆ ಯಾವುದೇ ಸಂಖ್ಯೆಯಿಂದ ಕರೆ ಮಾಡದಂತೆ ಎಚ್ಚರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದವನು. ಬಾಲಕ ಅಜ್ಜಿಯೊಂದಿಗೆ ಮಾತನಾಡಲು ಕರೆ ಮಾಡಿದ್ದನು, ಈ ವೇಳೆ ಶಿಕ್ಷಕರು ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್​ ಸೇರಿ ಹಿರಿಯ ಅಧಿಕಾರಿಗಳ ಭೇಟಿ, ಪರಿಶೀಲನೆ: ತಹಶೀಲ್ದಾರ್ ಮತ್ತು ಇತರ ಜಿಲ್ಲಾ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದ್ದಾರೆ. ಈ ಮಧ್ಯೆ ಹಲವು ಪೋಷಕರು ಶಾಲಾ ಆವರಣದ ಬಳಿ ಜಮಾಯಿಸಿ ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದಾರಲ್ಲದೇ ವಸತಿ ಶಾಲೆಯ ಮೇಲೆ ಕಠಿಣ ಮೇಲ್ವಿಚಾರಣೆ ನಡೆಸುವಂತೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ