Breaking News

ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ; ಪಕ್ಷದ ತೀರ್ಮಾನವೇ ಅಂತಿಮ: ಸಚಿವ ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ನಾವು 2028ಕ್ಕೆ ಸಿಎಂ ಕ್ಲೈಮ್ ಮಾಡುತ್ತೇವೆ ಅಂತಾ ಈ ಮುಂಚೆಯೇ ಹೇಳಿದ್ದೇವೆ. ಅದನ್ನು ಪಕ್ಷ ತೀರ್ಮಾನ ಮಾಡಬೇಕು. ಇನ್ನು ಯತೀಂದ್ರ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ ತಾಲೂಕಿನ ಕಾಕತಿಯಲ್ಲಿ ಕಾಕತಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ ಯಾರು ನಾಯಕತ್ವ ವಹಿಸಿಕೊಳ್ಳಬೇಕು ಅಂತಾ ಪಕ್ಷ, ಶಾಸಕರು ನಿರ್ಧಾರ ಮಾಡಬೇಕು. ಎಲ್ಲರನ್ನೂ ಜೊತೆಗೆ ಒಯ್ಯುವ ಪ್ರಯತ್ನ ಮಾಡುತ್ತಿದ್ದೇವೆ ಅಂತಿಮವಾಗಿ ಪಕ್ಷವೆ ನಿರ್ಧಾರ ಮಾಡಬೇಕು ಎಂದರು.

ಅಹಿಂದ ನಾಯಕತ್ವ ಇದ್ದೇ ಇದೆ. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ಹಿಂದೆಯೂ ಇದೆ. ಇವತ್ತೂ ಇದೆ. ನಾಳೆಯೂ ಕೂಡ ಇದ್ದೇ ಇರುತ್ತದೆ. ಅಹಿಂದ ನಾಯಕತ್ವ ಇಲ್ಲದೇ ರಾಜಕಾರಣ ಮಾಡಲು ಆಗುವುದಿಲ್ಲ‌‌‌. ಎಲ್ಲವನ್ನೂ ಇವತ್ತೆ ಜೋಡಿಸಲು ಆಗಲ್ಲ. ಅದಕ್ಕಾಗಿ ಕಾಯಬೇಕಾಗುತ್ತದೆ ಎಂದು ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರು ಇದರಲ್ಲಿ ಪ್ರಮುಖ ಮಾತ್ರ ವಹಿಸಬೇಕಾಗುತ್ತದೆ ಎಂಬುದಕ್ಕೆ ಎಲ್ಲವನ್ನೂ ಇಂದು ಕಾಕತಿಯಲ್ಲಿ ತೀರ್ಮಾನಿಸಲು ಆಗಲ್ಲ‌‌. ಇನ್ನೂ 30 ತಿಂಗಳು ಇದೆ. ನಂತರ ಏನೇನು ಬೆಳವಣಿಗೆ ಆಗುತ್ತದೆ‌?. ಪಕ್ಷ, ಶಾಸಕರು, ಆಗಿನ ವಾತಾವರಣದ ಮೇಲೆ ನಿರ್ಧಾರ ಆಗುತ್ತದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.

ಯತೀಂದ್ರ ಅವರದ್ದು ವೈಯಕ್ತಿಕ ಅಭಿಪ್ರಾಯ ಅಂತಾ ನಾನು ಈಗಾಗಲೇ ಹೇಳಿದ್ದೇನೆ. ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಲು ಅಧಿಕಾರ ಇದೆ. ಮತ್ತು ಸ್ವತಂತ್ರರಾಗಿದ್ದಾರೆ. ಹಾಗಾಗಿ, ಹೇಳಿದ್ದಾರೆ ಅಷ್ಟೇ. ಮಂದೆ ಏನಾಗುತ್ತದೆ ಅಂತಾ ನೋಡೋಣ ಎಂದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ ಎಂದು ಉತ್ತರಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ