Breaking News

ಮೋಂಥಾ ಚಂಡಮಾರುತದ ಎಫೆಕ್ಟ್: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ

Spread the love

ಬೆಂಗಳೂರು: ಮೋಂಥಾ ಚಂಡಮಾರುತ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿ ತೀರದ ಮೂಲಕ ಹಾದುಹೋಗಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 27 (ಇಂದಿನಿಂದ) ಅ. 29ರ ವರೆಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಇಂದು, ನಾಳೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರ ಅವಧಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ತಜ್ಞ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.

ಮೋಂಥಾ ಚಂಡಮಾರುತವು ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ, ಚೆನ್ನೈನಿಂದ 520 ಕಿಲೋ ಮೀಟರ್​ ಮತ್ತು ಆಂಧ್ರಪ್ರದೇಶದ ಕಾಕಿನಾಡದಿಂದ 570 ಕಿಲೋ ಮೀಟರ್​ ದೂರದಲ್ಲಿದ್ದು, ವಾಯವ್ಯ ದಿಕ್ಕಿನಲ್ಲಿ ಮತ್ತಷ್ಟು ಚಲಿಸುವ ಮತ್ತು ತೀವ್ರಗೊಳ್ಳುವ ಹೆಚ್ಚಿನ ಸಂಭವನೀಯತೆಯಿದೆ. ನಾಳೆ (ಅಕ್ಟೋಬರ್ 28) ಸಂಜೆ ಅಥವಾ ರಾತ್ರಿ ಕಾಕಿನಾಡ ಕರಾವಳಿಯನ್ನ (ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣಂ ನಡುವೆ) ದಾಟುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಗಾಳಿಯ ವೇಗ ಗಂಟೆಗೆ 90 ರಿಂದ 100 ಕಿ.ಮೀ., ಕೆಲವೊಮ್ಮೆ ಗಂಟೆಗೆ 110 ಕಿ.ಮೀ. ತಲುಪುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಯೆಲ್ಲೋ ಅಲರ್ಟ್: ಇಂದು (ಅಕ್ಟೋಬರ್ 27) ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಇಂದು ಮತ್ತು ನಾಳೆ ಈ ಜಿಲ್ಲೆಗಳಿಗೆ ಅಲರ್ಟ್: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

​​ಕರಾವಳಿ ಜಿಲ್ಲೆಗಳಲ್ಲಿ ಇಂದು (ಸೋಮವಾರ) ಹೆಚ್ಚಿನ ಪ್ರಮಾಣದ ಮಳೆಯಾಗಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಹಲವೆಡೆ ಮಳೆ ಅಬ್ಬರಿಸಿದೆ. ​ಗದಗದಲ್ಲಿ – 7 ಸೆಂಟಿ ಮೀಟರ್​, ​ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ – 3 ಸೆಂಟಿ ಮೀಟರ್​, ​ಮಂಡ್ಯದಲ್ಲಿ – 3 ಸೆಂಟಿ ಮೀಟರ್ ಮಳೆ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ