Breaking News

ಕ್ರೀಡಾಳುಗಳಿಗೆ ಒಲಿಂಪಿಕ್‌ ತರಬೇತಿಗೆ ಸರ್ಕಾರದಿಂದ 10ಲಕ್ಷ ರೂ‌ಪಾಯಿ ನೀಡುತ್ತೇವೆ: ಸಿಎಂ

Spread the love

ಮಂಗಳೂರು: ರಾಜ್ಯ ಕ್ರೀಡಾಪಟುಗಳಿಗೆ ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿ ಸುದ್ದಿಯೊಂದನ್ನು ತಿಳಿಸಿದ್ದಾರೆ. ಜನಸಂಖ್ಯೆಯಲ್ಲಿ ನಂಬರ್ ಒನ್‌ ಆಗಿರುವ ಭಾರತ ಒಲಿಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು. ಅದಕ್ಕಾಗಿ ನಮ್ಮ ಸರ್ಕಾರ ಕ್ರೀಡೆಗೆ ಸದಾ ಪ್ರೋತ್ಸಾಹ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಉರ್ವದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಲಿಂಪಿಕ್​, ಪ್ಯಾರಾ ಒಲಿಂಪಿಕ್​ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ. ಡಿವೈಎಸ್‌ಪಿ ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ 2ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ 3ಕ್ಕೆ ಹೆಚ್ಚಿಸಿದ್ದೇವೆ. ಜೊತೆಗೆ ಒಲಿಂಪಿಕ್‌ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂ. ಬಹುಮಾನ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಲಿಂಪಿಕ್‌ಗೆ ತರಬೇತಿ ಪಡೆಯಲು 10ಲಕ್ಷ ರೂ‌. ನೀಡುತ್ತೇವೆ. ಒಟ್ಟಿನಲ್ಲಿ ಪದಕ ಗೆದ್ದು ತನ್ನಿ ಎಂದು ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ವಿಶ್ವದ ಅತ್ಯಂತ ಜನಪ್ರಿಯ ಆಟಗಳಲ್ಲಿ ಬ್ಯಾಂಡ್ಮಿಂಟನ್ ಕೂಡ ಒಂದು. ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ. ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಈ ಪಂದ್ಯಾವಳಿ ನಡೆಯುತ್ತಿರುವ ಈ ಉರ್ವ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದ್ದು ನಾನೇ, ಉದ್ಘಾಟನೆ ಕೂಡ ನಾನೇ ಮಾಡಿದೆ. ನಮ್ಮ ಸರ್ಕಾರದ್ದೇ ಹಣ. ಹಿಂದಿನ ಬಿಜೆಪಿ ಸರ್ಕಾರ ಈ ಕ್ರೀಡಾಂಗಣ ಪೂರ್ಣಗೊಳ್ಳಲು ಸಹಕಾರ ನೀಡಲಿಲ್ಲ. ಆದರೆ ಮತ್ತೆ ನಾನೇ ಮುಖ್ಯಮಂತ್ರಿ ಆಗಿ ಬಂದು ಒಟ್ಟು 38 ಕೋಟಿ ರೂಪಾಯಿಗಳನ್ನು ನೀಡಿ ಕ್ರೀಡಾಂಗಣ ಪೂರ್ಣಗೊಳಿಸಲಾಯಿತು ಎಂದು ಸಿಎಂ ವಿವರಿಸಿದರು.

ಈ ವೇಳೆ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಪೂವಯ್ಯ ಸೋದರರೆಂದೇ ಖ್ಯಾತರಾದ ಅರುಣ್ ಪೂವಯ್ಯ ಮತ್ತು ಅಶೋಕ್ ಪೂವಯ್ಯ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು


Spread the love

About Laxminews 24x7

Check Also

ಅಕ್ಟೋಬರ್ 28ರಿಂದ ಸೋಯಾ, ಸೂರ್ಯಕಾಂತಿ, ಹೆಸರು ಖರೀದಿ ಆರಂಭ: ಸಚಿವ ಶಿವಾನಂದ ಪಾಟೀಲ

Spread the love ಬೆಂಗಳೂರು: ಬೆಂಬಲ ಬೆಲೆಯಲ್ಲಿ ಅಕ್ಟೋಬರ್ 28ರಿಂದ (ಮಂಗಳವಾರ) ಸೋಯಾಬಿನ್‌, ಸೂರ್ಯಕಾಂತಿ ಮತ್ತು ಹೆಸರುಕಾಳು ಖರೀದಿ ಪ್ರಕ್ರಿಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ