Breaking News

ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಡೆಸಲಾಯಿತು.

Spread the love

ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಹಾಗೂ ಗೃಹಲಕ್ಷ್ಮಿ ಸೊಸೈಟಿ ರಚನೆಯ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡುವ ಬಗ್ಗೆ ಸಲಹೆ ಸೂಚನೆ ನೀಡಲಾಯಿತು. ಇದೇ ವೇಳೆ ಅಕ್ಕಾಪಡೆ, ಸಖಿ‌ ಒನ್ ಸ್ಟಾಪ್ ಸೆಂಟರ್, ಸರ್ಕಾರಿ ಮಾಂಟೆಸ್ಸರಿ ಬಗ್ಗೆಯೂ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹೇಶ್ ಬಾಬು, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಎಂ.ಜಿ.ಪಾಲಿ, ನಟರಾಜ್, ಹಲೀಮಾ, ಭಾರತಿ ಶೆಟ್ಟರ್, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ