Breaking News

ಕಳುವಾಗಿದ್ದ 894 ಮೊಬೈಲ್​ ಸಿಇಐಆರ್ ಪೋರ್ಟಲ್ ಸಹಾಯದಿಂದ ಹಿಂಪಡೆದ ಪೊಲೀಸರು

Spread the love

ಬೆಂಗಳೂರು :‌ ಸೂಕ್ತ ದಾಖಲೆಗಳಿಲ್ಲದೇ ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್‌ಗಳನ್ನು ಖರೀದಿಸುವ ಮುನ್ನ ಎಚ್ಚರ. ಕದ್ದು ಮಾರಾಟ ಮಾಡಲಾಗಿದ್ದ 894 ಮೊಬೈಲ್ ಫೋನ್‌ಗಳನ್ನು ಬೆಂಗಳೂರಿನ ಇಂಟಿಗ್ರೇಟೆಡ್ ಕಮ್ಯಾಂಡ್ ಮತ್ತು ಕಂಟ್ರೋಲ್ ಸೆಂಟರ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR) ಪೋರ್ಟಲ್ ಸಹಾಯದಿಂದ ಈ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

CEIR ಬಳಕೆ ಮಾಡುವುದು ಹೇಗೆ?: ಕಳ್ಳತನವಾದ ಅಥವಾ ಕಳೆದುಕೊಂಡ ಮೊಬೈಲ್ ಫೋನ್‌ನಲ್ಲಿರುವ ಡೇಟಾವನ್ನು ಅಳಿಸಲು ಅಥವಾ ಫೋನ್ ಬ್ಲಾಕ್ ಮಾಡಲು ಅನುಕೂಲಕರವಾಗುವಂತೆ 2023ರಲ್ಲಿ ಕೇಂದ್ರ ದೂರಸಂಪರ್ಕ ಇಲಾಖೆ ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR) ಪೋರ್ಟಲ್‌ ಪರಿಚಯಿಸಿದೆ. ಮೊಬೈಲ್ ಕಳೆದುಕೊಂಡವರು ಸಿಇಐಆರ್ ಪೋರ್ಟಲ್‌ಗೆ ತೆರಳಿ ಫೋನ್‌ನ ಇಂಟರ್ನ್ಯಾಷನಲ್ ಮೊಬೈಲ್ ಇಕ್ವಿಪ್ಮೆಂಟ್ ಐಡೆಂಟಿಟಿ (IMEI) ನಂಬರ್ ನಮೂದಿಸಬೇಕಾಗುತ್ತದೆ. ಇದರಿಂದ ಕಳೆದು ಹೋದ ಫೋನ್‌ನಲ್ಲಿ ಬೇರೆ ಯಾವುದಾದರೂ ನಂಬರ್ ಚಾಲ್ತಿಯಲ್ಲಿದ್ದರೆ ಪತ್ತೆಹಚ್ಚಲು ಸಹಕಾರಿಯಾಗುತ್ತದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ