Breaking News

ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ.

Spread the love

ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ.
ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಯೋಜನೆ ಗಳನ್ನು ಸರಿಯಾದ ಫಲಾನುಭವಿಗಳಿಗೆ ಮ೭ಟ್ಟಿಸುವ ಕಾರ್ಯ ಮಾಡಬೇಕು ಎಂದು ಬೆಳಗಾವಿ ಲೋಕಾಯುಕ್ತ ಅಧಿಕಾರಿ ವೆಂಕಟೇಶ ಯಡಹಳ್ಳಿ ಹೇಳಿದರು.
ಅವರು ಇಂದು ಹುಕ್ಕೇರಿ ನಗರದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಜರುಗಿದ ಲೋಕಾಯುಕ್ತ ಜಾಗೃತಿ ಶಿಬಿರದಲ್ಲಿ ಭಾಗ ವಹಿಸಿ ತಾಲೂಕಿನ ವಿವಿಧ ಅಧಿಕಾರಿಗಳಿಗೆ ಲೋಕಾಯುಕ್ತ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು.
ತಹಸಿಲ್ದಾರ ಬಲರಾಮ ಕಟ್ಟಿಮನಿ ಮಾತನಾಡಿ ಸರಕಾರಿ ನೌಕರರು ತಮ್ಮ ಬಳಿ ಬಂದ ಜನರ ಸಮಸ್ಯೆಗಳನ್ನು ಅರಿತು ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಸೌಲಭ್ಯ ವದಗಿಸುವ ಕಾರ್ಯ ನಡೆಯ ಬೇಕು ಎಂದರು ( )
ವೇದಿಕೆ ಮೇಲೆ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಟಿ ಆರ್ ಮಲ್ಲಾಡದ ಉಪಸ್ಥಿತರಿದ್ದರು.
ಬೆಳಗಾವಿ ಲೋಕಾಯುಕ್ತ ಇನ್ಸಪೇಕ್ಟರ ವೆಂಕಟೇಶ ಯಡಹಳ್ಳಿ ಮಾತನಾಡಿ ಸರ್ಕಾರದ ಅಧಿಕಾರಿಗಳ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಪ್ರತಿ ತಾಲೂಕಾ ಮಟ್ಟದಲ್ಲಿ ಜಾಗೃತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ , ಸರ್ಕಾರದ ಒಂದು ಭಾಗವಾಗಿ ಅಧಿಕಾರಿಗಳು ಯೋಜನೆಗಳನ್ನು ಸೂಕ್ತ ಫಲಾನುಭವಿಗಳಿಗೆ ಯಾವದೇ ಫಲಾಪೆಕ್ಷೆ ಇಲ್ಲದೆ ತಲುಪಿಸುವ ಕಾರ್ಯಮಾಡಬೇಕು ಎಂದರು (
ಈ ಸಂದರ್ಭದಲ್ಲಿ ಲೋಕಾಯುಕ್ತ ಸಿಬ್ಬಂದಿಗಳಾದ ರಾಜಶ್ರೀ ಭೋಸಲೆ, ಲಗಮನ್ನ ಹೋಸಮನಿ ,ಧನಂಜಯ ನಾಯಕ, ಹಾಗೂ ಹುಕ್ಕೇರಿ ತಾಲೂಕಿನ ವಿವಿಧ ಇಲಾಖೆಗಳ ಅನುಷ್ಟಾನ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ

Spread the loveಸವದತ್ತಿ: ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ