Breaking News

ದಾವಣಗೆರೆಯಲ್ಲಿ ಸಚಿವ ಎಸ್​.ಎಸ್​. ಮಲ್ಲಿಕಾರ್ಜುನ್​ ಅವರನ್ನು ಡಿಸಿಎಂ ಮಾಡಬೇಕೆಂಬ ಕೂಗು ಕೇಳಿಬಂದಿದೆ.

Spread the love

ದಾವಣಗೆರೆ: ಕಾಂಗ್ರೆಸ್​ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವುದರ ನಡುವೆ ಸಚಿವ ಎಸ್​.ಎಸ್​. ಮಲ್ಲಿಕಾರ್ಜುನ್​ ಅವರನ್ನು ಡಿಸಿಎಂ ಮಾಡಬೇಕೆಂಬ ಕೂಗು ಕೇಳಿಬಂದಿದೆ. ಎಸ್​.ಎಸ್​. ಮಲ್ಲಿಕಾರ್ಜುನ್​ ಅವರಿಗೆ ಡಿಸಿಎಂ ಹುದ್ದೆ ಕೊಡಿ ಎಂಬ ದಾವಣಗೆರೆ ಕಾಂಗ್ರೆಸ್​ ಕಾರ್ಯಕರ್ತರ ಕೂಗಿಗೆ, ಬೆಂಬಲಿಗರು ಧ್ವನಿಗೂಡಿಸಿದ್ದಾರೆ.

ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಸರ್ಕಾರದ ಅವಧಿಗಳಲ್ಲಿ ಮೂರು ಬಾರಿ ಸಚಿವರಾಗಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. ಅಲ್ಲದೆ ರಾಜಕೀಯದಲ್ಲಿ ಹಿಡಿತ ಹೊಂದಿರುವ ಅವರನ್ನು ಏಕೆ ಡಿಸಿಎಂ ಮಾಡಬಾರದು ಎಂದು ಇಲ್ಲಿನ ಕಾರ್ಯಕರ್ತರು ಕಾಂಗ್ರೆಸ್ ಹೈಕಮಾಂಡ್​ಗೆ ಪ್ರಶ್ನೆ ಮಾಡ್ತಿದ್ದಾರೆ. ಕಾಂಗ್ರೆಸ್​ನಲ್ಲಿ 36 ಮಂದಿ ಲಿಂಗಾಯತ ಶಾಸಕರು ಗೆದ್ದಿದ್ದಾರೆ.

ಲಿಂಗಾಯತ ಕೋಟಾದಡಿ ಎಸ್​.ಎಸ್. ಮಲ್ಲಿಕಾರ್ಜುನ್ ಅವರಿಗೆ ಡಿಸಿಎಂ ಸ್ಥಾನ ನೀಡಿ ಎಂದು ಕಾರ್ಯಕರ್ತರು ಮನವಿ ಮಾಡುತ್ತಿದ್ದಾರೆ.ಹಿಂದೆ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರದಲ್ಲಿ ಎಸ್​. ಎಸ್. ಮಲ್ಲಿಕಾರ್ಜುನ್ ಅವರು ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಸಚಿವರಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದರು. ಬಳಿಕ

ಸಿದ್ದರಾಮಯ್ಯನವರು ಸಿಎಂ ಆಗಿದ್ದ ಮೊದಲ ಅವಧಿಯಲ್ಲಿ ತೋಟಗಾರಿಕೆ ಹಾಗೂ ಎಪಿಎಂಸಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು ಮೂರು ಬಾರಿ ಸಚಿವರಾಗಿರುವ ಎಸ್​.ಎಸ್ ಮಲ್ಲಿಕಾರ್ಜುನ್ ಅವರಿಗೆ ಡಿಸಿಎಂ ಸ್ಥಾನ ನೀಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ವಿನಂತಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ