Breaking News

ಟನಲ್ ರಸ್ತೆ ಯೋಜನೆಗೆ ಬಿಜೆಪಿ ವಿರೋಧ ರಾಜಕೀಯಪ್ರೇರಿತ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಟನಲ್ ರಸ್ತೆ ಯೋಜನೆಯನ್ನು ಬಿಜೆಪಿಯವರು ರಾಜಕೀಯ ಉದ್ದೇಶಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಟನಲ್ ರಸ್ತೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಇಂದು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧ ಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು.

ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ: ಟನಲ್ ರಸ್ತೆ ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆಯನ್ನು ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು? ಇದೇ ರೀತಿಯ ಟನಲ್ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ ಎಂದು ತಿಳಿಸಿದರು.

ಟನಲ್ ಯೋಜನೆಯನ್ನು ಶ್ರೀಮಂತರನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ ಎಂದು ದೂರು ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟನಲ್ ಯೋಜನೆಯನ್ನು ಕಾರು, ಬಸ್, ದ್ವಿಚಕ್ರ ವಾಹನ, ಕಾಲ್ನಡಿಗೆಯವರಿಗೂ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದರು.

ಡಿಕೆಶಿ ಪ್ರತಿಕ್ರಿಯೆ: ಇದಕ್ಕೂ ಮುನ್ನ ಟನಲ್ ರಸ್ತೆ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಟನಲ್ ರಸ್ತೆ ಯೋಜನೆ ನನ್ನ ಆಸ್ತಿಯಲ್ಲ. ಇದು ಸಾರ್ವಜನಿಕರಿಗಾಗಿ ಮಾಡುವ ಯೋಜನೆ. ನಾನು ಎಲ್ಲ ಅಧ್ಯಯನ ಮಾಡಿದ್ದೇನೆ. ಲಾಲ್​ಬಾಗ್​ನ ಎಷ್ಟು ಜಾಗ ಬಳಸಲಾಗುತ್ತಿದೆ, ಎಷ್ಟು ಜಾಗ ಬಳಸುತ್ತಿಲ್ಲ ಎಂಬ ಮಾಹಿತಿ ನನ್ನಲ್ಲಿದೆ. ಲಾಲ್​ಬಾಗ್ ಇತಿಹಾಸ ನನಗೆ ಗೊತ್ತು, ಲಾಲ್​ಬಾಗ್ ಹಾಳು ಮಾಡಲು ನಾನು ಮೂರ್ಖನಲ್ಲ ಎಂದಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ