Breaking News

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯ ಫಲಿತಾಂಶ ಪ್ರಕಟ: ಜಾರಕಿಹೊಳಿ ಟೀಂಗೆ ಸ್ಪಷ್ಟ ಬಹುಮತ

Spread the love

ಬೆಳಗಾವಿ, (ನವೆಂಬರ್ 02): ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (Belagavi DCC Bank Election) ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು,

ರಮೇಶ ಕತ್ತಿ, ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ನಾಲ್ವರು ವಿಜೇತರಾಗಿದ್ದಾರೆ. ನ್ಯಾಯಾಲಯದ ಆದೇಶದಂತೆ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದ್ದು, ಜಾರಕಿಹೊಳಿ ಟೀಂ ಸ್ಪಷ್ಟಬಹುಮತ ಸಿಕ್ಕಿದೆ. ಇನ್ನು ಮುಂದಿನ 15 ದಿನಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಲಿದ್ದು, ಯಾರು ಅಧ್ಯಕ್ಷರಾಗಿಲಿದ್ದಾರೆ ಎನ್ನುವುದನ್ನು ಜಾರಕಿಹೊಳಿ ಬ್ರದರ್ಸ್ (Jarkiholi Brothers)​ ತೀರ್ಮಾನಿಸಲಿದ್ದಾರೆ. ಹೀಗಾಗಿ ಅಧ್ಯಕ್ಷರ ಆಯ್ಕೆ ತೀವ್ರ ಕುತೂಹಲ ಮೂಡಿಸಿದೆ.ಡಿಸಿಸಿ ಬ್ಯಾಂಕಿನ 16 ನಿರ್ದೇಶಕರ ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು,

ಇನ್ನುಳಿದ 7 ಸ್ಥಾನಗಳಿಗೆ ಅಕ್ಟೋಬರ್ 19ರಂದು ಮತದಾನವಾಗಿತ್ತು. ಇನ್ನು ಅಂದು ಸಂಜೆಯೇ ರಾಮದುರ್ಗ, ಅಥಣಿ ಹಾಗೂ ರಾಯಬಾಗ ಕ್ಷೇತ್ರಗಳ ನಿರ್ಧೆಶಕರ ಫಲಿತಾಂಶ ಪ್ರಕಟವಾಗಿತ್ತು.ಆದ್ರೆ, ಹುಕ್ಕೇರಿ, ನಿಪ್ಪಾಣಿ ಬೈಲಹೊಂಗಲ ಮತ್ತಯ ಚನ್ನಮ್ಮನ ಕಿತ್ತೂರು ಕ್ಷೇತ್ರಗಳಿಂದ ಗೆದ್ದವರು ಯಾರು ಸೋತವರು ಯಾರು ಎಂಬುವುದು ಖಚಿತವಾಗಿತ್ತಾದರೂ ಕೋರ್ಟ್ ತಡೆಯಾಜ್ಞೆ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆ ಆಗಿರಲಿಲ್ಲ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ