Breaking News

ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯ ಹೊಸ ಕಟ್ಟಡ ಉದ್ಘಾಟಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

Spread the love

ಚಿಕ್ಕೋಡಿ :ನೂತನವಾಗಿ ನಿರ್ಮಾಣವಾದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಉದ್ಘಾಟಿಸಿದರು.
ಬಳಿಕ ಮಾಧ್ಯಮಗಳ ಜೊತಗೆ ಮಾತನಾಡಿದ ಪ್ರಿಯಂಕಾ ಜಾರಕಿಹೊಳಿ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ್ದು ಸಂತಸ ತಂದಿದೆ.ಈ ಕಚೇರಿಯು ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ಜನರಿಗೆ ಅನುಕೂಲವಾಗಲಿ ಹಾಗೂ ಪಕ್ಷ ಸಂಘಟನೆಗಾಗಿ ಕಚೇರಿ ಅನುಕೂಲವಾಗಲಿದೆ.
ಕೆಪಿಸಿಸಿ ಕಾರ್ಯದರ್ಶಿ ಮಹಾವೀರ ಮೊಹಿತೆ ಅವರಿಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಸಿಗಲಿ ಎಂದು ಹಾರೈಸಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಮಾತನಾಡಿ ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಅಭಿವೃದ್ಧಿ ಕಾಮಗಾರಿಗೆ 61 ಲಕ್ಷ ರೂಪಾಯಿ ಅನುದಾನ ಮಂಜೂರ ಆಗಿದೆ ಎಂದರು. ಹುಕ್ಕೇರಿ, ರಾಯಬಾಗ, ಚಿಕ್ಕೋಡಿ ,ನಿಪ್ಪಾಣಿ ,ಅಥಣಿ ಕಾಗವಾಡ, ಸೇರಿದಂತೆ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನವನ್ನು ಒದಗಿಸಲಾಗಿದೆ ಎಂದರು.
ಕೆಪಿಸಿಸಿ ಕಾರ್ಯದರ್ಶಿ ಮಹಾವೀರ ಮೋಹಿತೆ ಮಾತನಾಡಿ ಜನರ ಕೆಲಸ ಕಾರ್ಯಗಳಿಗಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅನುಕೂಲಕ್ಕಾಗಿ ಈ ಕಚೇರಿಯನ್ನು ನಿರ್ಮಿಸಲಾಗಿದೆ ಹಾಗೂ ಪಕ್ಷ ಸಂಘಟನೆ ಈ ಕಾರ್ಯಾಲಯದ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಲಕ್ಷ್ಮಣರಾವ ಚಿಂಗಳೆ,
ಸಿದ್ದಪ್ಪಾ ಮರ್ಯಾಯಿ,ಶಿವು ಪಾಟೀಲ,ಎಚ್.ಎಸ್.ನಸಲಾಪುರೆ,ಪ್ರಭಾಕರ ಕೋರೆ,ರಾಜು ಕೋಟಗಿ,ಶಂಕರಗೌಡ ಪಾಟೀಲ,ರಮೇಶ ಪಾಟೀಲ,ನಿರ್ಮಲಾ ಪಾಟೀಲ,ಗಣೇಶ ಮೋಹಿತೆ,ಶ್ಯಾಮ ರೇವಡೆ,ಸಂತೋಷ ನವಲೆ,ದಿಲೀಪ ಜಮಾದಾರ,ಅರ್ಜುನ ಬಂಡಗರ,ಸುರೇಶ ಘರಬುಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ