ಬಾಗಲಕೋಟೆ: ಗಂಡ ಹೃದಯಘಾತವಾಗಿ ಮೃತಪಟ್ಟ ಸುದ್ದಿ ಕೇಳಿ ಹೆಂಡತಿಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ. ಈ ಮೂಲಕ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.
ಶಶಿಧರ ಪತ್ತಾರ(40) ಎಂಬವರಿಗೆ ಸೋಮವಾರ ಹೃದಯಾಘಾತವಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿ ಆಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಾವಿನ ಸುದ್ದಿ ತಿಳಿದ ತಕ್ಷಣ ಆಘಾತಕ್ಕೆ ಹೆಂಡತಿಯೂ ಹೃದಯಾಘಾತಗೊಂಡು ಸಾವನ್ನಪ್ಪಿದ್ದಾರೆ. ಪತ್ನಿ ಸರೋಜಾ (35) ಹೃದಯಾಘಾತಗೊಂಡು ಸಾವನ್ನಪ್ಪಿದವರು.
ಹದಿನೈದು ವರ್ಷಗಳ ಹಿಂದೆ ಇಬ್ಬರಿಗೂ ಮದುವೆಯಾಗಿತ್ತು. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ. ಒಂದೇ ಸಮಯದಲ್ಲಿ ಗಂಡ ಹೆಂಡತಿ ಮೃತಪಟ್ಟಿರುವುದು, ಮನೆಯಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.
ಶಶಿಧರ್ ಅವರು ಜೀವನೋಪಾಯಕ್ಕಾಗಿ ಚಿನ್ನದ ಅಂಗಡಿ ನಡೆಸುತ್ತಿದ್ದರು. ಅವರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿದ್ದವು ಎನ್ನಲಾಗಿದೆ.
Laxmi News 24×7