Breaking News

ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

Spread the love

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸವಿವರವಾಗಿ ಚರ್ಚಿಸಿ, ಅವರಿಗೆ ಶಾಶ್ವತ ಹಾಗೂ ಸಮಗ್ರ ಪರಿಹಾರ ಒದಗಿಸುವ ದಿಟ್ಟ ನಿರ್ಣಯದತ್ತ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲೇ ಫಲಪ್ರದ ಕ್ರಮಗಳ ಮೂಲಕ ರೈತರ ಹಿತ ಹಾಗೂ ಸಕ್ಕರೆ ಕಾರ್ಖಾನೆಗಳ ಸ್ಥಿರತೆಯನ್ನು ಖಚಿತಪಡಿಸಲು ಸರ್ಕಾರ ಪ್ರಯತ್ನ ಮುಂದುವರಿಸಿದರು

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್‌.ಕೆ‌. ಪಾಟೀಲ್‌, ಎಂ‌.ಬಿ‌. ಪಾಟೀಲ್‌, ಶಿವಾನಂದ ಪಾಟೀಲ್‌, ಆರ್‌.ಬಿ‌. ತಿಮ್ಮಾಪುರ, ಶರಣ್ ಪ್ರಕಾಶ್ ಪಾಟೀಲ್‌, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್‌, ಸಂಸದರಾದ ಲೆಹರ್ ಸಿಂಗ್‌, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಾಜನೀಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ