Breaking News

ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು… ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!! 3,300 ರೂ. ಬೆಂಬಲ ಬೆಲೆ ನೀಡಲು ಅಸ್ತು…

Spread the love

ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!!
3,300 ರೂ. ಬೆಂಬಲ ಬೆಲೆ ನೀಡಲು ಅಸ್ತು…
ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ!!!
3,300 ರೂ. ಬೆಂಬಲ ಬೆಲೆ ನೀಡಲು ಅಸ್ತು…
ಮೊದಲ ಹಂತದಲ್ಲಿ 3200 ರೂಪಾಯಿ
ಬಳಿಕ 6 ತಿಂಗಳಲ್ಲಿ 50 + 50 ರೂಪಾಯಿ
ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಂತೆ ತೋರುತ್ತಿದೆ. ಇಂದು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಇದೀಗ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ಒಪ್ಪಿಗೆ ನೀಡಿದ್ದಾರೆ.
ಮೊದಲ ಹಂತದಲ್ಲಿ 3200 ರೂಪಾಯಿ ನೀಡಲಿದ್ದು, ಬಳಿಕ 50 ರೂಪಾಯಿ ಹಾಗೂ 6 ತಿಂಗಳಲ್ಲಿ ಇನ್ನು 50 ರೂಪಾಯಿ ನೀಡಲಿದೆ. ಅಂದರೆ ಒಟ್ಟು 3300 ರೂಪಾಯಿಗಳನ್ನು ನೀಡಲು ಸರ್ಕಾರ ಒಪ್ಪಿದೆ. ಆದರೆ ಕಬ್ಬು ಬೆಳೆಗಾರರು 3500 ರೂಪಾಯಿ ನೀಡುವಂತೆ ಪಟ್ಟು ಹಿಡಿದು, ಹೋರಾಟ ನಡೆಸಿದ್ದರು. ಇದೀಗ ಸರ್ಕಾರ 3300 ರೂಪಾಯಿಗಳನ್ನು ಘೋಷಿಸಿದೆ.
ಇಂದು ಮಧ್ಯಾನ್ಹ ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯನ್ನು ನಡೆಸಲಾಯಿತು. ನಂತರ ಕಬ್ಬು ಬೆಳೆಗಾರರ ಸಭೆಯನ್ನು ನಡೆಸಲಾಯಿತು. ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬೆಳಗಾವಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು.
ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಮುಖಂಡರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ದರ ನಿಗದಿ ಮಾಡಲು ನಿರ್ಧರಿಸಿದೆ. ಸರ್ಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ನೀಡಲಾಗುವುದು. ಈ ಮೂಲಕ ಒಟ್ಟು 3300 ರೂಪಾಯಿ ನೀಡಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನಂತರ ಮಾಧ್ಯಮಗೋಷ್ಟಿ ನಡೆಸಿ ಸಿಎಂ ಸಿದ್ಧರಾಮಯ್ಯ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಮಾಹಿತಿಯನ್ನು ನೀಡಿದರು.
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ, ಸಕ್ಕರೆ ಎಂಎಸ್ಪಿ ಹೆಚ್ಚಳ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಅವರು ಸಮಯ ನೀಡಿದರೆ ನಾಳೆಯೇ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಲು ಸಿದ್ಧರಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ತೀರ್ಮಾನಗಳನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದಿದ್ದಾರೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ