Breaking News

ಡೆಲಿವರಿ ಬಾಯ್​ಗಳಿಂದ ಅಪರಾಧ ಪ್ರಕರಣ ಹೆಚ್ಚಳ: ಇ – ಕಾಮರ್ಸ್ ಕಂಪನಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

Spread the love

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಡೆಲಿವರಿ ಬಾಯ್​ಗಳಿಂದ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ಸಂಬಂಧ ಸ್ವಿಗ್ಗಿ- ಜೊಮ್ಯಾಟೋ ಸೇರಿದಂತೆ ನಗರದ ವಿವಿಧ ಇ-ಕಾಮರ್ಸ್​ ಕಂಪನಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಸಭೆಯಲ್ಲಿ 40ಕ್ಕೂ ಹೆಚ್ಚು ಇ-ಕಾಮರ್ಸ್ ಕಂಪನಿಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ನಗರದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್​ಗಳಿಂದ ಅಪರಾಧ ಹೆಚ್ಚಾಗುತ್ತಿವೆ. ಪೂರ್ವಾಪರ ತಿಳಿಯದೇ ಕೆಲಸಕ್ಕೆ ನೇಮಿಸುತ್ತಿರುವುದರಿಂದ ಗ್ರಾಹಕರೊಂದಿಗೆ ಅನುಚಿತ ವರ್ತನೆ ತೋರುವುದು, ರೋಡ್ ರೇಜ್​ನಲ್ಲಿ ಭಾಗಿ, ಡೆಲಿವರಿ ವಿಳಂಬದ ಬಗ್ಗೆ ಪ್ರಶ್ನಿಸಿದರೆ ಗ್ರಾಹಕರ ಮೇಲೆ ಹಲ್ಲೆ, ಸರಗಳ್ಳತನ, ಗ್ರಾಹಕರು ಆರ್ಡರ್ ಮಾಡುವ ವಸ್ತು ಕಳ್ಳತನ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಡೆಲಿವರಿ ಬಾಯ್​ಗಳು ಭಾಗಿಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಡೆಲಿವರಿ ಬಾಯ್​ಗಳು ಅಪರಾಧ ಕೃತ್ಯಗಳಲ್ಲಿ ತೊಡಗಿರುವುದು ಕಂಡು ಬಂದರೆ ಕಂಪನಿಗಳ ಮುಖ್ಯಸ್ಥರು ಅಥವಾ ಸಿಇಒ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಆಯುಕ್ತರು ಖಡಕ್ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಹುಬ್ಬಳ್ಳಿ ಗರ್ಭಿಣಿ ಕೊಲೆ ಪ್ರಕರಣ: ಕರ್ತವ್ಯಲೋಪದಡಿ ಇಬ್ಬರು ಪೊಲೀಸ್​ ಸಿಬ್ಬಂದಿ ಅಮಾನತು, ಸಂತ್ರಸ್ತ ಕುಟುಂಬ ಭೇಟಿ ಮಾಡಿದ ಡಿಸಿ, ಶಾಸಕರು

Spread the loveಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಅನ್ಯಜಾತಿ ಯುವಕನ ಮದುವೆಯಾಗಿದ್ದಕ್ಕೆ ಗರ್ಭಿಣಿ ಮೇಲೆ ಆಕೆಯ ತಂದೆ, ಕುಟುಂಬಸ್ಥರು ಹಲ್ಲೆಗೈದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ