Breaking News

ಗೋಕಾಕ ದ ನವಜೀವನ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಹುಝೇಫ್ ಶಫಿಕ್ ಸನದಿ ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್‌ಗೆ ಆಯ್ಕೆ!

Spread the love

ಗೋಕಾಕ ದ ನವಜೀವನ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಹುಝೇಫ್ ಶಫಿಕ್ ಸನದಿ ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್‌ಗೆ ಆಯ್ಕೆ!

ಬೆಳಗಾವಿ: ನವಜೀವನ್ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಹುಝೇಫ್ ಶಫಿಕ್ ಸನದಿ ಸನ್ 2025-26 ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ, ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿಯುಂಟುಮಾಡಿದ್ದಾನೆ.

ಹಾವೇರಿಯಲ್ಲಿ ನಡೆದ ವಿಭಾಗ ಮಟ್ಟದ ಬಾಸ್ಕೆಟ್‌ಬಾಲ್ ಸ್ಪರ್ಧೆಯಲ್ಲಿ ಹುಝೇಫ್ ಶ್ರೇಷ್ಠ ಆಟ ತೋರಿಸಿ ರಾಜ್ಯ ಮಟ್ಟದ ತಂಡಕ್ಕೆ ಸ್ಥಾನ ಗಳಿಸಿದ್ದಾನೆ.

ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಸಹಪಾಠಿಗಳು ಹುಝೇಫ್‌ ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದು, ರಾಜ್ಯ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಝೇಫ್ ಶಫಿಕ್ ಸನದಿ ಅವರ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ