ಬೆಳಗಾವಿ :ಹೊಸ ಗುತ್ತಿಗೆದಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬುಧವಾರ ಭಾರತೀಯ ಟೆಲಿಕಾಂ ಮಜದುರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹೊಸ ಗುತ್ತಿಗೆದಾರರು ಅಧಿಕಾರ ವಹಿಸಿಕೊಂಡ ಬಳಿಕ ಕೆಲಸದಿಂದ ವಂಚಿತರಾದ ಎಲ್ಲಾ ಕಾರ್ಮಿಕರಿಗೆ ತಕ್ಷಣ ಕೆಲಸ ನೀಡಬೇಕು. ಯಾವುದೇ ಕಾರ್ಮಿಕನು ಯೂನಿಯನ್ ಚಟುವಟಿಕೆಯಲ್ಲಿ ಭಾಗವಹಿಸಿದ ಕಾರಣಕ್ಕೆ ಕೆಲಸ ಕಳೆದುಕೊಳ್ಳಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕಾನೂನುಬದ್ಧ ಸೌಲಭ್ಯಗಳಾದ ವಾರದ ವಿಶ್ರಾಂತಿ ದಿನ, ರಾಷ್ಟ್ರೀಯ ಮತ್ತು ಹಬ್ಬದ ರಜ, 8 ಗಂಟೆಗಳ ಕರ್ತವ್ಯ ಮಿತಿ, ಹಾಗೂ ಹೆಚ್ಚುವರಿ ಕೆಲಸಕ್ಕೆ ನ್ಯಾಯಸಮ್ಮತ ವೇತನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಎಲ್ಲಾ ಕಾರ್ಮಿಕರಿಗೆ ವೈದ್ಯಕೀಯ ಮತ್ತು ಅಪಘಾತ ವಿಮೆ ನೀಡಬೇಕು.
ಕರ್ತವ್ಯದ ವೇಳೆ ಸಾವು ಸಂಭವಿಸಿದಲ್ಲಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಎಲ್ಲಾ ಫೀಲ್ಡ್ ಸಿಬ್ಬಂದಿಗೆ ಅಗತ್ಯವಾದ ಸುರಕ್ಷತಾ ಉಪಕರಣಗಳು ಸಮಯಕ್ಕೆ ಸರಿಯಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇಂಡಸ್ ಟವರ್ಸ್ ತನ್ನ ಎಲ್ಲಾ ಕಾನ್‌ಟ್ರಾಕ್ಟರ್‌ಗಳ ಕಾರ್ಮಿಕರಿಗೂ ಕಾನೂನುಬದ್ಧ ರಕ್ಷಣೆಯನ್ನು ಖಚಿತಪಡಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ನ್ಯಾಯಯುತ ವೇತನ ಪರಿಷ್ಕರಣೆ ಮತ್ತು ಎಲ್ಲರಿಗೂ ಸಮಾನ ವೇತನ ವ್ಯವಸ್ಥೆ ಜಾರಿಗೊಳಿಸಬೇಕು ಇಲ್ಲದಿದ್ದರೇ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸತೀಶ್ ನಿಲಜಕರ್, ಭಗವಂತ ಮಾನೆ ಶಿಂಧೆ, ಸುನೀಲ್ ಬೊಮ್ಮನಹಳ್ಳಿ, ಶಂಕರ ಗುರುಬಸಪ್ಪಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Laxmi News 24×7