Breaking News

ರಾಜ್ಯದಲ್ಲಿ ಹಾವು ಕಡಿತ ಪ್ರಕರಣ​ ಹೆಚ್ಚಳ

Spread the love

ಬೆಂಗಳೂರು, ನವೆಂಬರ್​ 13: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಜೊತೆಗೆ ಹಾವುಗಳ ಕಾಟವೂ ಹೆಚ್ಚಿದೆ. ಅತಿಯಾಗಿ ನಡೆಯುತ್ತಿರುವ ಕಾಂಕ್ರಿಟೀಕರಣದ ಪ್ರಭಾವದಿಂದಾಗಿ ಹಾವುಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿದ್ದು, ಅವುಗಳ ಕಡಿತ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿದೆ. ಕೇವಲ 10 ತಿಂಗಳ ಅವಧಿಯಲ್ಲಿ 18 ಸಾವಿರಕ್ಕೂ ಹೆಚ್ಚು ಹಾವು ಕಡಿತ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದು, ಒಟ್ಟು 125 ಜನ ಈವರೆಗೆ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಒಂದು ವಾರದ ಅವಧಿಯಲ್ಲೇ 512 ಹಾವು ಕಡಿತ ಕೇಸ್​ಗಳು ಪತ್ತೆಯಾಗಿದ್ದು, ಆ ಪೈಕಿ ಮೂವರು ಅಸುನೀಗಿದ್ದಾರೆ.

ಹಾವು ಕಡಿತ ಕೇಸ್​ಗಳ ಸಂಖ್ಯೆ ಏರಿಕೆ

ವರ್ಷ        ಕೇಸ್​ಗಳ ಸಂಖ್ಯೆ            ಸಾವು

2021                  950                    0

2022                3439                  17

2023                6596                  19

2024               13,235                 95

2025               18,246               125 (ಜನವರಿಯಿಂದ-ನವೆಂಬರ್​ 2ರ ವರೆಗೆ)ಹಾವು ಕಡಿತ ಕೇಸ್​​ಗಳ ಪೈಕಿ ಹಲವರು ಸಕಲಾದಲ್ಲಿ ಚಿಕಿತ್ಸೆ ಮತ್ತು ಔಷಧ ಸಿಗದೆ ಮೃತಪಟ್ಟಿದ್ದು, ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಹೀಗಾಗಿ ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯ ಇರುವ ಔಷಧ ದಾಸ್ತಾನು ಇಟ್ಟುಕೊಳ್ಳವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಆಸ್ಪತ್ರೆಗಳಲ್ಲಿ ಬೇಡಿಕೆ ಇರುವಷ್ಟು ಆ್ಯಂಟಿ ಸ್ನೇಕ್‌ ವೀನೋಮ್ ಸ್ಟಾಕ್ ಇರಿಸುವಂತೆ ತಿಳಿಸಲಾಗಿದ್ದು, ಯಾವುದೇ ತರನಾದ ಹಾವು ಕಡಿದರೂ ನಿರ್ಲಕ್ಷ್ಯ ವಹಿಸದಂತೆ ಸಾರ್ವಜನಿಕರಿಗೂ ಸೂಚಿಸಲಾಗಿದೆ. ಹೀಗಿದ್ದರೂ ಜನ ನಿರ್ಲಕ್ಷ್ಯ ತೋರುತ್ತಿದ್ದು, ತುರ್ತು ಚಿಕಿತ್ಸೆ ಪಡೆಯುತ್ತಿಲ್ಲ. ಬದಲಾಗಿ ನಾಟಿ ಔಷಧಿಗಳ ಮೊರೆ ಹೋಗಿ ಅಂತಿಮ ಹಂತದಲ್ಲಿ ಆಸ್ಪತ್ರೆಗಳಿಗೆ ಬರುತ್ತಿದ್ದಾರೆ. ಹೀಗಾಗಿಯೇ ಹಾವು ಕಡಿತದಿಂದ ಮೃತರ ಸಂಖ್ಯೆಯೂ ಹೆಚ್ಚಳವಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಹಚ್ಚೆಗಳು ಕೇವಲ ಶಾಯಿಯ ಪದಗಳಾಗಿರದೆ, ದುರಂತದ ಕ್ಷಣದಲ್ಲಿ ತಂದೆ ಮತ್ತು ಮಗನ ನಡುವಿನ ಅಂತಿಮ ಕೊಂಡಿಯಾಗಿ ಕಾರ್ಯನಿರ್ವಹಿಸಿದವು.

Spread the love ದೆಹಲಿಯ ಕೆಂಪು ಕೋಟೆ ಬಳಿ ನಡೆದ ಮಾರಕ ಸ್ಫೋಟದ ನಂತರ, ಚಾಂದನಿಚೌಕ್‌ನ ೩೪ ವರ್ಷದ ಉದ್ಯಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ