ತುಮಕೂರು: ನಾನು ಕಾಂಗ್ರೆಸ್ ಬಿಟ್ಟುಬಿಡುತ್ತೇನೆ ಎಂದು ಹೇಳಲಾಗುತ್ತಿದೆ. ಆದರೆ ನಾನು ಎಂದೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದೇನೆಯೇ ಹೊರತು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದರು.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಸಾಲ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ಸಮಾನವಾದ ಅವಕಾಶ ನೀಡುವಂತಹ ಪಕ್ಷ ಕಾಂಗ್ರೆಸ್ ಆಗಿದೆ ಎಂದು ನಾನು ನಂಬಿದ್ದೇನೆ. ಈ ರೀತಿಯ ಎಲ್ಲಾ ಅವಕಾಶ ದೊರಕಿಸುಕೊಡುವ ನೀತಿಯನ್ನು ಪಕ್ಷ ರೂಢಿಸಿಕೊಂಡು ಬಂದಿದೆ. ಹೀಗಾಗಿ ನಾನು ಯಾವುದೇ ಆಸೆ, ಆಮಿಷಕ್ಕೆ ಒಳಗಾಗಿ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸಲು ಹೋಗುವುದಿಲ್ಲ ಎಂದರು.
Laxmi News 24×7