ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಎನ್.ಹೆಚ್.ಎ.ಐ ವತಿಯಿಂದ ಉದ್ದೇಶಿಸಲಾದ ವಿವಿಧ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಬಾಕಿ ಇರುವ ಇತರ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕೇಂದ್ರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದ ಸಚಿವ ಸತೀಶ ಜಾರಕಿಹೊಳಿ..
ಸಭೆಯಲ್ಲಿ ಪ್ರಸ್ತುತ ಕಾಮಗಾರಿಗಳ ಗತಿಯನ್ನೂ, ಭೂಸ್ವಾಧೀನಕ್ಕೆ ಸಂಬಂಧಿಸಿದ ಸವಾಲುಗಳನ್ನೂ ಪರಿಶೀಲಿಸಲಾಗಿದ್ದು, ಯೋಜನೆಗಳನ್ನು ವೇಗಗತಿಯಲ್ಲಿ ಪೂರ್ಣಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ವೇಳೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Laxmi News 24×7