Breaking News

ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಪಾಠ, ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ: ಸತೀಶ್ ಜಾರಕಿಹೊಳಿ

Spread the love

ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಪಾಠ, ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ: ಸತೀಶ್ ಜಾರಕಿಹೊಳಿ

 

ದಾವಣಗೆರೆ : ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ. ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದ ಆವರಣದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೂ ಮುನ್ನ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕಡೆ ಸಂಚಾರ ಮಾಡಲು ಹೆಲಿಕಾಪ್ಟರ್ ಬದಲಾವಣೆ ಮಾಡಲಾಗಿದೆ. ಚುನಾವಣಾ ದೃಷ್ಟಿಯಿಂದ ಹೆಲಿಕಾಪ್ಟರ್ ಬದಲಾಯಿಸಲಾಗಿದೆ. ಇದರಲ್ಲಿ ಏನೂ ವಿಶೇಷತೆ ಇಲ್ಲ ಎಂದು ತಿಳಿಸಿದರು.

ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ, ಆದ್ರೆ ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಪಾಠ. ಸೋಲಿಗೆ ಎಲ್ಲೆಲ್ಲಿ ಲೋಪದೋಷ ಆಗಿದೆ ಎನ್ನುವುದರ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಬಿಹಾರ ರಾಜ್ಯದಲ್ಲಿ ನಡೆದಿದೆ ಎನ್ನಲಾದ ವೋಟ್ ಚೋರಿ ಬಗ್ಗೆ ಮೊದಲಿಂದಲೂ ಆರೋಪ ಕೇಳಿ ಬರುತ್ತಿದೆ. ಅದಕ್ಕೆ ಚುನಾವಣಾ ಆಯೋಗ ಉತ್ತರ ಕೊಡಬೇಕಿದೆ ಎಂದರು.

ಕಾಂಗ್ರೆಸ್​ನವರು ಏನು ಆರೋಪ ಮಾಡಿದ್ದಾರೋ ಅದಕ್ಕೆ ಅವರು ಉತ್ತರ ಕೊಡಬೇಕಿದೆ. ಬಿಹಾರದ ಜನತೆಯ ಮನಸ್ಥಿತಿ ಇಲ್ಲಿಯ ಜನರ ಮನಸ್ಥಿತಿ ಬೇರೆ ಬೇರೆ. ಕರ್ನಾಟಕದಲ್ಲಿ ಅಹಿಂದಕ್ಕೆ ಹೆಚ್ಚು ಮಹತ್ವ ಇದೆ. ಬಿಹಾರದಲ್ಲಿ ಎಲ್ಲರನ್ನೂ ಒಗ್ಗೂಡಿಸಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಎಲ್ಲಾ ಅಹಿಂದ ವರ್ಗವನ್ನು ಒಗ್ಗೂಡಿಸಲು ಸಾಧ್ಯವಿದೆ. ಬಿಹಾರ ಚುನಾವಣೆ ಫಲಿತಾಂಶ ಗೆದ್ದರೂ ಚರ್ಚೆಯಾಗಬೇಕು, ಸೋತರೂ ಚರ್ಚೆಯಾಗಬೇಕು ಎಂದು ಸಚಿವ ಜಾರಕಿಹೊಳಿ ಹೇಳಿದ್ದಾರೆ.

ನಾವು ಏಕೆ ಸೋತ್ವಿ ಎಂದು ಪ್ರಮುಖವಾಗಿ ಚರ್ಚೆಯಾಗಬೇಕು. ಬಿಹಾರದಲ್ಲಿ ನಮ್ಮ ಗ್ಯಾರೆಂಟಿ ಇರಲಿಲ್ಲ, ಅವರ ಸರ್ಕಾರ ಇತ್ತು. ಅವರು ಗ್ಯಾರೆಂಟಿ ಘೋಷಣೆ ಮಾಡಿ ಸಕ್ಸಸ್ ಆದರು. ವೋಟ್ ಚೋರಿ ಬಗ್ಗೆ ನಮ್ಮ ವರಿಷ್ಠರು ತೀರ್ಮಾನ ಮಾಡ್ತಾರೆ, ಮುಂದೆ ಏನ್ ಆಗುತ್ತೋ ಕಾದು ನೋಡ್ಬೇಕಿದೆ ಎಂದರು.

ಸಿಎಂ ಬದಲಾವಣೆ ವಿಚಾರದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ‌. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.‌


Spread the love

About Laxminews 24x7

Check Also

ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love *ಅಂಧರ ಕ್ರಿಕೆಟ್ ಟೂರ್ನಿಗೂ ಜಾಗತಿಕ ಮನ್ನಣೆ ಸಿಗುವಂತಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಅಂಧ ಮಹಿಳೆಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ