Breaking News

ನವೆಂಬರ್ ಕ್ರಾಂತಿಯ ಸದ್ದು ಗದ್ದಲದ ಮಧ್ಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಇದೀಗ ನಾಯಕತ್ವ ಬದಲಾವಣೆಯೋ ಅಥವಾ ಸಂಪುಟ ಪುನಾರಚನೆಯೋ ಎಂಬ ಗೊಂದಲವನ್ನು ಮತ್ತಷ್ಟು ಹೆಚ್ಚಾಗಿಸಿದೆ. ನವೆಂಬರ್ ಕ್ರಾಂತಿಯ ಚರ್ಚೆಗೆ ಉಭಯ ನಾಯಕರ ದೆಹಲಿ ಭೇಟಿ ಇನ್ನಷ್ಟು ರೆಕ್ಕೆಪುಕ್ಕಗಳನ್ನು ನೀಡಿದೆ.

ಒಂದೆಡೆ ಕಾಂಗ್ರೆಸ್ ಪಾಳಯದಲ್ಲಿ ನವೆಂಬರ್​ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಕೇಳಿಬರುತ್ತಿದ್ದು, ಇನ್ನೊಂದೆಡೆ ಸಂಪುಟ ಪುನಾರಚನೆಯ ಸಾಧ್ಯತೆಯ ಕೂಗು ಜೋರಾಗಿ ಕೇಳಿ ಬರುತ್ತಿದೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಈ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ ಎಂಬ ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ಬಲವಾಗಿ ಕೇಳಿ ಬರುತ್ತಿತ್ತು.

ಇದೀಗ ಬಿಹಾರ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗುತ್ತೆ ಎಂಬ ಚರ್ಚೆ ಮತ್ತಷ್ಟು ಹೆಚ್ಚಾಗಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ನೀಡಿರುವುದು ಕ್ರಾಂತಿಯ ಗೊಂದಲವನ್ನು ಇನ್ನಷ್ಟು ಗಾಢಗೊಳಿಸಿದೆ. ಸಂಪುಟ ಪುನಾರಚನೆ ಆಗಲಿದೆಯೋ ಅಥವಾ ನಾಯಕತ್ವ ಬದಲಾವಣೆ ಆಗುತ್ತೋ ಎಂಬ ಕುತೂಹಲವನ್ನು ಕಾಂಗ್ರೆಸ್ ಪಾಳಯ ಹಾಗೂ ರಾಜ್ಯ ರಾಜಕೀಯದಲ್ಲಿ ಇಮ್ಮಡಿಗೊಳಿಸಿದೆ. ಉಭಯ ನಾಯಕರ ಭೇಟಿ ಈ ಗೊಂದಲಗಳಿಗೆ ತೆರೆ ಬೀಳಿಸುತ್ತೋ ಅಥವಾ ಇನ್ನಷ್ಟು ಗೊಂದಲ ಹುಟ್ಟು ಹಾಕುತ್ತೋ ಎಂಬುದು ರಾಜ್ಯ ರಾಜಕೀಯದಲ್ಲಿನ ಪ್ರಶ್ನೆಯಾಗಿವೆ.

ಸಿಎಂ ಸಿದ್ದರಾಮಯ್ಯ – ರಾಹುಲ್ ಭೇಟಿ: ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದಾರೆ. ಜನಪಥದಲ್ಲಿನ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸುಮಾರು ಅರ್ಧ ತಾಸಿಗೂ ಹೆಚ್ಚು ಕಾಲ ಸಿಎಂ ಸಿದ್ದರಾಮಯ್ಯ-ರಾಹುಲ್ ಗಾಂಧಿ ಚರ್ಚೆ ನಡೆಸಿರುವುದು ಹಲವು ಕುತೂಹಲಗಳನ್ನು ಮೂಡಿಸಿದೆ.

ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದರೆ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದರು. ಇದೀಗ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಆದರೆ, ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ ಬಳಿ ಚರ್ಚೆ ನಡೆಸಿಲ್ಲ ಎಂದು ತಿಳಿಸಿರುವುದು ಹಲವು ಅಚ್ಚರಿ ಮತ್ತು ವ್ಯಾಖ್ಯಾನಗಳನ್ನು ಹುಟ್ಟು ಹಾಕಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ