ನವದೆಹಲಿ/ಹುಬ್ಬಳ್ಳಿ: ಕೇಂದ್ರ ಸರ್ಕಾರ ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳದ ಕಮಿಷನ್ ಅನ್ನು ಸಮಾನಾಂತರವಾಗಿ 27 ರೂ.ಗಳಿಗೆ ಹೆಚ್ಚಿಸಿ ಸೊಸೈಟಿಗಳ ಬಲವರ್ಧನೆಗೆ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) ರಚಿಸಿದ ಸಮಿತಿಯು ಪಡಿತರ ಧಾನ್ಯಗಳ ಕಮಿಷನ್ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಅದರ ಅನ್ವಯ ಪ್ರಧಾನಿ ನರೇಂದ್ರ ಮೋದಿ ಅವರು ಸೊಸೈಟಿಗಳ ಬಲವರ್ಧನೆ ಮತ್ತು ರೈತರಿಗೂ ಹೆಚ್ಚಿನ ಅನುಕೂಲವಾಗುವಂತೆ ಈ ಪಡಿತರ ಧಾನ್ಯಗಳ ಕಮಿಷನ್ ಅನ್ನು ಪರಿಷ್ಕರಿಸಿ, ದೇಶದ ಪಡಿತರ ವ್ಯವಸ್ಥೆಗೆ ಉತ್ತೇಜನ ನೀಡಿದ್ದಾರೆ ಎಂದು ಜೋಶಿ ಹೇಳಿದ್ದಾರೆ.
ಪ್ರಧಾನಿ ಅವರ ಈ ನಿಲುವಿನಿಂದ ಆಯಾ ರಾಜ್ಯಗಳಲ್ಲಿ ಧಾನ್ಯ ಸಂಗ್ರಹಣೆ ಹೆಚ್ಚಳಕ್ಕೆ ಉತ್ತೇಜನ ಸಿಕ್ಕಂತಾಗಿದೆ. ಮತ್ತು ಸ್ಥಳೀಯವಾಗಿ ಸೊಸೈಟಿ, ಸಂಘಗಳ ಬಲವರ್ಧನೆಗೆ ಸಹಕಾರಿಯಾಗಲಿದೆ. ಅಲ್ಲದೇ, ಕೇಂದ್ರ ಸರ್ಕಾರದ ಶ್ರೀ ಅನ್ನ ಯೋಜನೆಗೆ ಮತ್ತಷ್ಟು ಬೆಂಬಲ ಸಿಕ್ಕಂತಾಗಿದೆ ಎಂದು ಕೇಂದ್ರ ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಪ್ರತಿ ಕ್ವಿಂಟಾಲ್‌ಗೆ 27 ರೂ. ಕಮಿಷನ್: ಇದೀಗ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಮಹತ್ತರ ಕ್ರಮ ಕೈಗೊಂಡಿದ್ದು, ರಾಜ್ಯಗಳಲ್ಲಿ ಗೋಧಿ, ಜೋಳ, ಮೆಕ್ಕೆಜೋಳ ಮತ್ತು ರಾಗಿ ವಿತರಿಸುವ ಸೊಸೈಟಿಗಳಿಗೆ ಕಮಿಷನ್ ಅನ್ನು ಪ್ರತಿ ಕ್ವಿಂಟಾಲ್‌ಗೆ 27 ರೂ. ಹೆಚ್ಚಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.
Laxmi News 24×7