Breaking News

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶು ಮರಣ ಪ್ರಕರಣ: ಡಿಸಿ ಭೇಟಿ‌, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ

Spread the love

ಹಾವೇರಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಾರಿಡಾರ್​ನಲ್ಲಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆಯಲಾರಂಭಿಸಿದೆ. ಮಹಿಳಾ ಯೋಗ, ರಾಜ್ಯ ಉಚ್ಚನ್ಯಾಯಾಲಯ ಮತ್ತು ಮಕ್ಕಳ ರಕ್ಷಣಾ ಘಟಕದ ದೂರಿನ‌ ಮೇರೆಗೆ ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ್​ ಜಿಲ್ಲಾಸ್ಪತ್ರೆಗೆ ಭೇಟಿ‌ ನೀಡಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರು.

ಘಟನೆ ಕುರಿತಂತೆ ತನಿಖಾ ತಂಡ ರಚಿಸಲಾಗಿದ್ದು ತಂಡದ ಸದಸ್ಯರು ಸಿಸಿಟಿವಿ ದೃಶ್ಯಗಳನ್ನು ವೀಕ್ಷಣೆ ನಡೆಸಿದರು. ಒಂದು ಗಂಟೆ ಕಾಲ ಸಿಸಿಟಿವಿ ಪರಿಶೀಲನೆ ಹಾಗೂ ಬಾಣಂತಿ ಮಹಿಳೆಯನ್ನು ಜಿಲ್ಲಾಧಿಕಾರಿ ಮಾತನಾಡಿಸಿ ಮಾಹಿತಿ ಪಡೆದರು. ಕರ್ನಾಟಕ ರಾಜ್ಯ ಮಹಿಳಾ ಆಯೋಗ ಮತ್ತು ಮಕ್ಕಳ ಆಯೋಗದಿಂದ ಆರೋಗ್ಯ ಇಲಾಖೆಯ ಕಾರಣ ಕೇಳಿ ವರದಿ ನೀಡುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ‌ಜಿಲ್ಲಾಸ್ಪತ್ರೆಗೆ ಭೇಟಿ‌ ನೀಡಿರುವುದಾಗಿ ಡಿಸಿ ಹೇಳಿದರು.ಹೆರಿಗೆ ವಾರ್ಡ್​​​ ಮತ್ತು ಕಾರಿಡಾರ್​​​​ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಇವತ್ತು ಸಂಜೆ ವರದಿ ಸಿಗಲಿದೆ

ಎಂದು ತಿಳಿಸಿದರು. “ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಕಾರಣಕರ್ತರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿಯನ್ನು ನೀಡಬೇಕು ಎಂದು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.

ಉಚ್ಚ ನ್ಯಾಯಾಲಯ ಹಾಗೂ ಮಕ್ಕಳ ಹಕ್ಕುಗಳ ಆಯೋಗದವರು ಈ ಬಗ್ಗೆ ವರದಿ ಕೇಳಿದ್ದಾರೆ. ಈ ಬಗ್ಗೆ ಒಂದು ತಂಡ ಮಾಡಿದ್ದೇವೆ. ತಂಡ ಈಗಾಗಲೇ ಸಿಸಿ ಕ್ಯಾಮರಾಗಳ ದೃಶ್ಯಗಳು ಹಾಗೂ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳುವುದಾಗಿ” ಜಿಲ್ಲಾಧಿಕಾರಿ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ