Breaking News

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ: ಸರ್ಕಾರದ ಮಹತ್ವದ ಆದೇಶ! 21.11.2025 ರಿಂದ ದಿನಾಂಕ: 12.12.2025 ರವರೆಗೆ ಕಾಲಾವಕಾಶ

Spread the love

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ: ಸರ್ಕಾರದ ಮಹತ್ವದ ಆದೇಶ!
21.11.2025 ರಿಂದ ದಿನಾಂಕ: 12.12.2025 ರವರೆಗೆ ಕಾಲಾವಕಾಶ
ರಿಯಾಯಿತಿಯ ಲಾಭವನ್ನು ಪಡೆದುಕೊಳ್ಳುವಂತೆ ಆಗ್ರಹ
ಸಾರ್ವಜನಿಕರಿಗೆ ಒಂದು ಮಹತ್ವದ ಸುದ್ದಿ ಇಲ್ಲಿದೆ. ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆಯಲ್ಲಿ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ (ಇ-ಚಲನ್) ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲು ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ದಂಡದ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತಕ್ಕೆ ರಿಯಾಯಿತಿ ಲಭ್ಯವಾಗಲಿದೆ.
ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲಾಗಿದೆ. ಈ ರಿಯಾಯಿತಿ ಸೌಲಭ್ಯವನ್ನು ಪಡೆಯಲು ದಿನಾಂಕ: 21.11.2025 ರಿಂದ ದಿನಾಂಕ: 12.12.2025 ರವರೆಗೆ ಕಾಲಾವಕಾಶ ನೀಡಲಾಗಿದೆ. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರವು ಈ ನಿರ್ಧಾರವನ್ನು ಕೈಗೊಂಡಿದ್ದು,
ಈ ಸೀಮಿತ ಅವಧಿಯ ರಿಯಾಯಿತಿಯ ಲಾಭವನ್ನು ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ತಿಳಿಸಿದೆ. ಈ ಕುರಿತು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಆದೇಶವನ್ನು ಹೊರಡಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ