Breaking News

ಕರಗಾಂವ ಏತ ನೀರಾವರಿ ಯೋಜನೆಗಾಗಿ ಡಿಸೆಂಬರ್ 4 ರಂದು ಚಿಕ್ಕೋಡಿಯಲ್ಲಿ ರೈತರಿಂದ ಬೃಹತ್ ಹೋರಾಟ

Spread the love

ಚಿಕ್ಕೋಡಿ:ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಡಿಸೆಂಬರ್ 4 ರಂದು ಚಿಕ್ಕೋಡಿಯಲ್ಲಿ ರೈತರಿಂದ ಬೃಹತ್ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಹಸಿರು ಸೇನೆ ಉಪಾಧ್ಯಕ್ಷ ಸತ್ಯಪ್ಪ ಮಲ್ಲಾಪೂರೆ ಹೇಳಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ೧೫ ಹಳ್ಳಿಗಳಿಗೆ ನೀರು ಪೂರೈಕೆ ಮಾಡುವ ಮಹತ್ವದ ಯೋಜನೆಯಾದ ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೃಹತ್ ಹೋರಾಟವನ್ನು ಮಾಡಲಾಗುವುದು.
ಈ ಹೋರಾಟ ರೈತ ಸಂಘದ ರಾಜ್ಯಾಧ್ಯಕ್ಷರಾದ ಚುನ್ನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರು ಸಹ ಭಾಗಿಯಾಗಲಿದ್ದಾರೆ.ಈ ಕಾರಣಕ್ಕೆ ಹೆಚ್ಚಿನ ರೈತರು ಈ ಹೋರಾಟದಲ್ಲಿ ಭಾಗವಹಿಸಿ ಸಹಕರಿಸಬೇಕೆಂದು ಸತ್ಯಪ್ಪ ಮಲ್ಲಾಪೂರೆಯವರು ಮನವಿಯನ್ನು ಮಾಡಿಕೊಂಡರು.
ಸತ್ಯಪ್ಪ ಮಲ್ಲಾಪೂರೆ,ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಮನೋಜ ಮನಗೂಳಿ,ಸಿದ್ರಾಮ ಕರಗಾಂವೆ,ಗೋಪಾಲ ಕೊಕನೂರ,ಮುರಗೇಪ್ಪ ಅಡಿಚೆರಿ,ಬಸವರಾಜ ಪಶ್ಚಾಪೂರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ