Breaking News

ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

Spread the love

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ.

ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರೇ ರೈಲಿಗೆ ಸಿಲುಕಿ ಸಾವನ್ನಪ್ಪಿದವರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ರೈಲ್ವೇ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.

ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್​ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸೂಪರ್ ಫಾಸ್ಟ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿದ್ದಾರೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರ ವಿವರಗಳನ್ನು ಪರಿಶೀಲಿಸಿದ ನಂತರ ಅವರ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ರೈಲ್ವೆ ಎಸ್​​ಪಿ ಮಾಹಿತಿ: ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ರೈಲ್ವೆ ಎಸ್​​ಪಿ ಯತೀಶ್ ಎನ್., ”ಮೃತರಿಬ್ಬರು ಸ್ನೇಹಿತರಾಗಿದ್ದು, ರೈಲಿನ ಸಿಸಿಟಿವಿ ಪರಿಶೀಲಿಸಿದಾಗ ಮೇಲ್ನೋಟಕ್ಕೆ ಇಬ್ಬರೂ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಕಂಡು ಬಂದಿದೆ. ಸದ್ಯದ ತನಿಖೆಯಲ್ಲಿ ಯಾವುದೇ ರೀತಿಯ ಡೆತ್ ನೋಟ್ ದೊರೆತಿಲ್ಲ. ಗ್ರಾಮಾಂತರ ರೈಲ್ವೆ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಯ ಕಾರಣದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ