Breaking News

ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

ದೂಧ್‌ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್‌ ನೀರು ಸೇರಿ ಒಟ್ಟು 71,452 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತವು ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ