ಯರಗಟ್ಟಿ: ತಾಲೂಕು ಆಡಳಿತ,ತಾಲೂಕ ಪಂಚಾಯತ್ ಸವದತ್ತಿ, ಸಮಾಜ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವುದು ಆಡಳಿತದ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದೆ.
ಇಂದು ಸವದತ್ತಿ ಮತ್ತು ಯರಗಟ್ಟಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಂದುಕೊರತೆ ನಿವಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದೆ.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ತಲುಪಬೇಕು. ಪರಿಶಿಷ್ಟರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು ಮತ್ತು ಬೀದಿ ದೀಪಗಳ ಸಮಸ್ಯೆಗಳ ಬಗ್ಗೆ ಬಂದಿರುವ ದೂರುಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರ ಅಲೆದಾಟಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ತಿಳಿಸಿದೆನು.
ಸಭೆಯಲ್ಲಿ ಸಾರ್ವಜನಿಕರಿಂದ ವಿವಿಧ ಅಹವಾಲುಗಳನ್ನು ಸ್ವೀಕರಿಸಲಾಯಿತು. ಗಂಗಾ ಕಲ್ಯಾಣ ಯೋಜನೆ, ವಸತಿ ಯೋಜನೆಗಳು ಮತ್ತು ಸ್ಮಶಾನ ಭೂಮಿ ಮಂಜೂರಾತಿ ಕುರಿತಾದ ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಶೀಘ್ರ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ಮಾಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು (EO), ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಯ ಮುಖ್ಯಸ್ಥರು ಹಾಗೂ ದಲಿತ ಮುಖಂಡರು ಉಪಸ್ಥಿತರಿದ್ದರು.
Laxmi News 24×7