Breaking News

ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು,

Spread the love

ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಜಿಲ್ಲೆಯಲ್ಲಿ ಈವರೆಗೆ 631 ಕೋವಿಡ್-19 ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು, ಇನ್ನೂ 183 ಸಕ್ರಿಯ ಪ್ರಕರಣಗಳಿವೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ