Breaking News

ಬಾಗಲಕೋಟೆ ರೈಲ್ವೆ ಬೇಡಿಕೆ: ಹೊಸ ಮಾರ್ಗ, ಹೊಸ ಸಂಚಾರಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ!

Spread the love

ಬಾಗಲಕೋಟೆ ರೈಲ್ವೆ ಬೇಡಿಕೆ: ಹೊಸ ಮಾರ್ಗ, ಹೊಸ ಸಂಚಾರಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ!
ಬಾಗಲಕೋಟೆ ರೈಲು ಬೇಡಿಕೆ, ಬೃಹತ್ ಪ್ರತಿಭಟನೆ
ಹೊಸ ಮಾರ್ಗ ಆಗ್ರಹಿಸಿ, ರಸ್ತೆಯಲ್ಲೇ ಧರಣಿ
ನಿಲ್ದಾಣ ಪ್ರವೇಶ ತಡೆದ ಪೊಲೀಸರು, ವಾಗ್ವಾದ!
ಸಂಘಟನೆಗಳ ಒಕ್ಕೂಟ, ರೈಲ್ವೆ ವಿರುದ್ಧ ಆಕ್ರೋಶ!
ಬಾಗಲಕೋಟೆ ಜಿಲ್ಲೆಯಿಂದ ರಾಜ್ಯದ ಹಾಗೂ ದೇಶದ ವಿವಿಧ ಪ್ರಮುಖ ಸ್ಥಳಗಳಿಗೆ ಹೊಸ ರೈಲು ಸಂಚಾರ ಮತ್ತು ಬಹುಕಾಲದ ಬೇಡಿಕೆಯಾದ ಹೊಸ ರೈಲು ಮಾರ್ಗಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಇಂದು ಬಾಗಲಕೋಟೆ ರೈಲ್ವೆ ನಿಲ್ದಾಣದ ಬಳಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ಕರ್ನಾಟಕ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ರೈತ ಸಂಘಟನೆಗಳು ಸಾಥ್ ನೀಡಿದವು.
ಪ್ರತಿಭಟನಾಕಾರರು ರೈಲು ನಿಲ್ದಾಣದ ಒಳಗೆ ಪ್ರವೇಶಿಸಿ ಧರಣಿ ನಡೆಸಲು ಯತ್ನಿಸಿದರು.
ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ ಪೊಲೀಸರು, ರೈಲು ನಿಲ್ದಾಣದ ಗೇಟ್ನ ಹೊರಗಡೆಯೇ ಅವರನ್ನು ತಡೆದರು.
ಈ ಸಂದರ್ಭದಲ್ಲಿ ಪೊಲೀಸರು ಮತ್ತು ಹೋರಾಟಗಾರರ ಮಧ್ಯೆ ತೀವ್ರ ವಾಗ್ವಾದ ನಡೆಯಿತು. “ಇದು ನಮ್ಮ ರೈಲ್ವೆ ನಿಲ್ದಾಣ, ನಾವು ಯಾವುದೇ ತೊಂದರೆ ಮಾಡುವುದಿಲ್ಲ. ಒಳಗೆ ಧರಣಿ ನಡೆಸಲು ಬಿಡಿ,” ಎಂದು ಹೋರಾಟಗಾರರು ಪಟ್ಟು ಹಿಡಿದರು
.
ಪ್ರತಿಭಟನಾಕಾರರು ರೈಲ್ವೆ ನಿಲ್ದಾಣದ ಗೇಟ್ ಎದುರಿಗೇ ಧರಣಿ ಕುಳಿತು, ರೈಲ್ವೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ರೈಲ್ವೆ ಸೌಲಭ್ಯಗಳ ಕೊರತೆ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದ ಹೋರಾಟಗಾರರು, ಕೂಡಲೇ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರ ಮತ್ತು ರೈಲ್ವೆ ಇಲಾಖೆಗೆ ಆಗ್ರಹಿಸಿದರು.
ಈ ಹೋರಾಟವು ಕರ್ನಾಟಕ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಕುತ್ಬುದ್ದಿನ್ ಖಾಜಿ ಅವರ ನೇತೃತ್ವದಲ್ಲಿ ನಡೆಯಿತು.

Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ