Breaking News

ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ…

Spread the love

ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ…
ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ; ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ
ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ…
ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ
ಗ್ರಾಮದಲ್ಲಿ ಜೆಜೆಎಂ ಯೋಜನೆ ಅನುಷ್ಠಾನಗೊಳಿಸಿ
ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ
ಖಾನಾಪೂರ ತಾಲೂಕಿನ ತೀರ್ಥಕುಂಡೆ ಗ್ರಾಮದಲ್ಲಿ ಅಕ್ರಮವಾಗಿ ಆರಂಭಗೊಂಡ ಕಲ್ಲು ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಬೇಕು. ಗ್ರಾಮದಲ್ಲಿ ಜೆಜೆಎಂ ಯೋಜನೆಯ ಅನುಷ್ಠಾನ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಇಂದು ಬೆಳಗಾವಿಯ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ಆಗಮಿಸಿ ಈ ಕುರಿತಾದ ಮನವಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲಾಯಿತು.
ಖಾನಾಪೂರ ತಾಲೂಕಿನ ತೀರ್ಥಕುಂಡೆ ಗ್ರಾಮದ ಜಲ ಜೀವನ್ ಮೀಷನ್ ಯೋಜನೆಯಡಿ 7 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್ ಪಾಸ್ ಮಾಡಲಾಗಿದೆ. ಆದರೇ, ಕಾಮಗಾರಿ ಆರಂಭಿಸಿಲ್ಲ. ಇದರಿಂದಾಗಿ ಜನರಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಅಲ್ಲದೇ, ರಸ್ತೆಗಳ ಅಭಿವೃದ್ಧಿಯಾಗಿಲ್ಲ.
ಬಸ್ಸಿನ ಸಮಸ್ಯೆ ತೀವ್ರವಾಗಿದೆ. ಇದರಿಂದಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಆದರೂ, ಖಾನಾಪೂರದ ಶಾಸಕ ವಿಠ್ಠಲ ಹಲಗೇಕರ್ ಅವರು ಯಾವುದೇ ಸಮಸ್ಯೆಯನ್ನು ಪರಿಹರಿಸಲು ಮುತುವರ್ಜಿಯನ್ನು ವಹಿಸಿಲ್ಲ. ಗ್ರಾಮಸ್ಥರಲ್ಲಿ ಅತಂತ್ರ ಸ್ಥಿತಿ ನಿರ್ಮಾಣಗೊಂಡಿದೆ. ಗ್ರಾಮದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಆರಂಭಗೊಂಡಿದೆ. ಇದರಿಂದಾಗಿ ಜಮೀನುಗಳು ಮತ್ತು ಮನೆಗಳು ಬಿರುಕುಗೊಳ್ಳುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಮಹೇಶ್ ಶೀಗಿಹಳ್ಳಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಸವಂತ ನಾಯಿಕ್, ಪ್ರಕಾಶ ಕಾಂಬಳೆ, ಜಾಂಬೋಟಿ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ