Breaking News

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

Spread the love

ಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ಸಭೆ ನಡೆಯಿತು.

ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಕುಟುಂಬ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆ.ಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಸರಬರಾಜಾದ ಫುಡ್ ಕಿಟ್‌ಗಳನ್ನು ನಿಗಮದ ಗೋದಾಮು/ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ 10ನೇ ತಾರೀಕಿನಳಗಾಗಿ ವಿತರಣೆ ಮಾಡಬೇಕು ಎಂದು ಸಿಎಂ ಸೂಚಿಸಿದರು.

ಪ್ರತೀ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದ್ದು, ಇದಕ್ಕಾಗಿ ತಿಂಗಳಿಗೆ 466 ಕೋಟಿ ರೂ ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಯಡಿ ಪ್ರತೀ ತಿಂಗಳು ಒಟ್ಟು 18,628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12,419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ.

ಆಹಾರ ಕಿಟ್​​ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆಯನ್ನು ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು. ನಾಫೆಡ್/ಎನ್ಸಿಸಿಎಫ್‌ನಂತಹ ಕೇಂದ್ರ ಸರಬರಾಜು ಸಂಸ್ಥೆಗಳ ಮೂಲಕ ಅಥವಾ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೆಟಿಪಿಪಿ ಅನ್ವಯ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಗುಣಮಟ್ಟದಲ್ಲಿ ರಾಜಿಯಾಗಬಾರದು: ಉತ್ತಮ ಗುಣಮಟ್ಟದ ಆಹಾರ ಸಾಮಗ್ರಿ ಪೂರೈಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿಯಾಗಬಾರದು. ಇದೇ ರೀತಿ ಅಳತೆಯಲ್ಲೂ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಪಾರದರ್ಶಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ