ಬೆಳಗಾವಿ: ಅತ್ತ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವು ತೀವ್ರ ಚರ್ಚೆಗೆ ಗ್ರಾಸವಾಗಿದ್ದರೆ, ಇತ್ತ ಸೈಲೆಂಟ್ ಆಗಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗಿದೆ. ಮತ್ತೊಂದು ಅವಧಿಗೆ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿ ಆಗುವ ನಿರೀಕ್ಷೆಯಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಕನಸಿಗೆ ಜಾರಕಿಹೊಳಿ ಸಹೋದರರು ತಣ್ಣೀರು ಎರಚಿದ್ದಾರೆ.
ಹೌದು, ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ, ಬ್ಯಾಂಕ್ ನಿರ್ದೇಶಕ ರಾಹುಲ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.ಪ್ರತಿ ಡಿಸಿಸಿ ಬ್ಯಾಂಕ್ನಿಂದ ಒಬ್ಬರನ್ನು ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ಪ್ರತಿನಿಧಿಗಳು ಸೇರಿಕೊಂಡು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ರಾಜ್ಯದಲ್ಲಿ ಪ್ರತಿಷ್ಠಿತ ಹುದ್ದೆಗಳಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನವೂ ಕೂಡ ಒಂದಾಗಿದೆ. ಬಹುತೇಕ ಶಾಸಕರು, ಸಹಕಾರಿ ರಂಗದಲ್ಲಿ ಕೆಲಸ ಮಾಡಿರುವವರು ಅಧ್ಯಕ್ಷಗಿರಿಗೆ ಪೈಪೋಟಿ ನಡೆಸುತ್ತಾರೆ. ಕಾಂಗ್ರೆಸ್ ಸರ್ಕಾರ ಇರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದ ಮೇಲೆ ಲಕ್ಷ್ಮಣ ಸವದಿ ಕಣ್ಣಿಟ್ಟಿದ್ದರು. ಆದರೆ, ಅವರ ಆಸೆಯನ್ನು ಜಾರಕಿಹೊಳಿ ಸಹೋದರರು ನಿರಾಸೆ ಮಾಡಿದ್ದಾರೆ.
Laxmi News 24×7