Breaking News

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಬಗ್ಗೆ ಎಲ್ಲಿಯೂ ಚರ್ಚೆಯಾಗಿಲ್ಲ. ಇದಕ್ಕೆ ನಮ್ಮ ಬೆಂಬಲದ ಅವಶ್ಯಕತೆಯಿಲ್ಲ.

Spread the love

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಬಗ್ಗೆ ಎಲ್ಲಿಯೂ ಚರ್ಚೆಯಾಗಿಲ್ಲ. ಇದಕ್ಕೆ ನಮ್ಮ ಬೆಂಬಲದ ಅವಶ್ಯಕತೆಯಿಲ್ಲ.
ಇದೆಲ್ಲ ಹೈಕಮಾಂಡ್’ಗೆ ಬಿಟ್ಟಿದ್ದು. ಮದುವೆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ನಮ್ಮ ಭೇಟಿಯಾಗಿದೆಯಷ್ಟೇ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಡಿಕೆಶಿ ಭೇಟಿಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮದುವೆ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಭೇಟಿಯಾಗಿದೆ. ಪ್ರತ್ಯೇಕವಾಗಿ ಮಾತುಕತೆ ನಡೆದಿದ್ದು, ನಿಜ. ಕೆಪಿಸಿಸಿ ಅಧ್ಯಕ್ಷರು ಈ ಹಿನ್ನೆಲೆ ಮಾತನಾಡಿದ್ದೇವೆ. ಮದುವೆ ಸಂದರ್ಭದಲ್ಲಿ ಭೇಟಿಯಾಗಿದೆಯಷ್ಟೇ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ಬಗ್ಗೆ ಎಲ್ಲಿಯೂ ಚರ್ಚೆಯಾಗಿಲ್ಲ. ಇದಕ್ಕೆ ನಮ್ಮ ಬೆಂಬಲದ ಅವಶ್ಯಕತೆಯಿಲ್ಲ.
ಇದೆಲ್ಲ ಹೈಕಮಾಂಡ್’ಗೆ ಬಿಟ್ಟಿದ್ದು ಎಂದರು. ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಲ್ಲ. ಕೋಲಾರ ಉಸ್ತುವಾರಿಯೂ ಅಲ್ಲ.
ಆದರೂ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕೋಲಾರದ ಮಾಲೂರು ತಾಲೂಕು ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗುರುವಾರವಷ್ಟೇ ಮಾಲೂರು ಮುಖಂಡ ಎನ್​.ವೆಂಕಟರಾಮ್​ ಎಂಬುವವರು ಸತೀಶ್ ಅವರ ಬೆಂಗಳೂರಿನ ಗೃಹ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ನಮ್ಮ ಜೊತೆ ಇದ್ದವರೇ ಅವರು ವಾಪಸ್ ಬಂದಿದ್ದಾರೆ ಅಷ್ಟೇ ಎಂದಿದ್ದಾರೆ.
ಸಚಿವ ಸಂಪುಟದ ಬಗ್ಗೆ ಬೆಳಗಾವಿ ಚಳಿಗಾಲದ ಅಧಿವೇಶನದ ಬಗ್ಗೆ ಸಿಎಂ ಕರೆದ ಸಭೆಯಲ್ಲಿ ಪೂರ್ವ ಸಿದ್ಧತೆಯ ಬಗ್ಗೆ ಮಾತ್ರ ಚರ್ಚಿಸಲಾಗಿದೆ. ಇನ್ನು ವಿರೋಧ ಪಕ್ಷ ಅವಿಶ್ವಾಸ ಗೊತ್ತುವಳಿ ಮಂಡನೆಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು.
ಇನ್ನು ಕುರ್ಚಿ ಕದನ ಅಧಿವೇಶನ ಮುಗಿಯುವ ವರೆಗೆ ಮಾತ್ರ ತಾತ್ಕಾಲಿಕ ವಿರಾಮ ನೀಡಲಾಗಿದೆಯೇ ಎಂಬ ಪ್ರಶ್ನೆಗೆ ಇದರ ಬಗ್ಗೆ ನಮಗೆ ಗೊತ್ತಿಲ್ಲ. ಇದರ ಬಗ್ಗೆ ಸಂಬಂಧಪಟ್ಟವರನ್ನೇ ಕೇಳಬೇಕು. ಹೈಕಮಾಂಡ್ ಒಂದು ಹಂತಕ್ಕೆ ತಂದಾಗ ಅದನ್ನ ಒಡೆಯುವ ಪ್ರಯತ್ನವನ್ನು ಯಾರೂ ಮಾಡಬಾರದು ಪಕ್ಷ ಗಟ್ಟಿಯಾಗಿರಬೇಕೆಂದರು

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ