Breaking News

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the love

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ ಚಾರ್ಜ್​​ಶೀಟ್ ಹಾಕಿರುವುದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.ಡಿ.19ರ ಒಳಗೆ ಪೊಲೀಸರಿಗೆ ಮಾಹಿತಿ ನೀಡಬೇಕು: ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ ಅವರಿಗೆ ಇ.ಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ಡಿಸೆಂಬರ್ 19ನೇ ತಾರೀಕಿನ ಒಳಗೆ ಮಾಹಿತಿ ನೀಡಬೇಕು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ