Breaking News

ಲೋಕಾ ಇನ್ಸ್​ಪೆಕ್ಟರ್​ ಸಜೀವ ದಹನ

Spread the love

ಧಾರವಾಡ: ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಕಾರು ಧಗಧಗ ಹೊತ್ತಿ ಉರಿದ ಹಿನ್ನೆಲೆಯಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​ ಸಾಲಿಮಠ ಅವರು ಅಪಘಾತದಲ್ಲಿ ಸಜೀವ ದಹನವಾಗಿದ್ದು, ಕಾರ್​​ನಲ್ಲಿಯೇ ಅವರ ದೇಹ ಹೊತ್ತಿ ಉರಿದಿದೆ. ಹುಬ್ಬಳ್ಳಿ ಮಾರ್ಗವಾಗಿ ಗದಗಿನತ್ತ ಕಾರು ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ಸಂಭವಿದೆ ಎಂದು ಶಂಕಿಸಲಾಗಿದೆ. ಡಿಕ್ಕಿ ರಭಸಕ್ಕೆ I20 ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.ಗದಗದಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿ ಮಾಡಲು ಇನ್ಸ್​​ಪೆಕ್ಟರ್​ ಸಾಲಿಮಠ​ ಹುಬ್ಬಳ್ಳಿ ಮಾರ್ಗವಾಗಿ ತಮ್ಮ ಕಾರಿನಲ್ಲಿ ತೆರಳುತ್ತಿದ್ದರು. ಈ ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದರು. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ