Breaking News

ಯಲ್ಲಮ್ಮನಗುಡ್ಡದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಭಾಗಿ!

Spread the love

ಯಲ್ಲಮ್ಮನಗುಡ್ಡದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಭಾಗಿ! 🙏
​ಮುಂಬರುವ ‘ಬನದ ಹುಣ್ಣಿಮೆ’ ಮತ್ತು ‘ಭಾರತ ಹುಣ್ಣಿಮೆ’ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಯಲ್ಲಮ್ಮನಗುಡ್ಡದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದೆನು.
​ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಕುಡಿಯುವ ನೀರು, ದೀಪಾಲಂಕಾರ, ಸ್ವಚ್ಛತೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.
​ವಿಶೇಷವಾಗಿ ಕ್ಷೇತ್ರದ ಪಾವಿತ್ರ್ಯತೆ ಕಾಪಾಡಲು 3 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮತ್ತು ಮಾಂಸ ಮಾರಾಟ ನಿಷೇಧಿಸಲು ತೀರ್ಮಾನಿಸಲಾಯಿತು.
​ಎಲ್ಲರೂ ಸಹಕರಿಸಿ, ಜಾತ್ರೆಯನ್ನು ಯಶಸ್ವಿಗೊಳಿಸೋಣ.
ಈ ವೇಳೆ ಅಧಿಕಾರಿಗಳು, ಶ್ರೀ ರೇಣುಕಾ ದೇವಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ