Breaking News

ಪಕ್ಷದ ಹೈಕಮಾಂಡ್‌ಗೆ ತಮ್ಮ ಬದ್ಧತೆಯನ್ನು ತಿಳಿಸುವ ಮೂಲಕ ಸಿಎಂ ಬದಲಾವಣೆ ಕುರಿತ ಚರ್ಚೆಗಳಿಗೆ ಮತ್ತೊಮ್ಮೆ ಸ್ಪಷ್ಟನೆ

Spread the love

ಗದಗ : ನಾನು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಇಕ್ಬಾಲ್ ಹುಸೇನ್ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿ, ಪಕ್ಷದ ಒಳಗಿನ ಯಾವುದೇ ಗೊಂದಲಕ್ಕೂ ತಾವು ಕಾರಣರಲ್ಲ ಎಂದ ಸ್ಪಷ್ಟಪಡಿಸಿದರು. ಪಕ್ಷದ ಒಗ್ಗಟ್ಟು ಮತ್ತು ಹೈಕಮಾಂಡ್‌ನ ನಿರ್ಧಾರಕ್ಕೆ ನಾನು ಯಾವಾಗಲೂ ಬದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆಯೂ ಮಾತನಾಡಿದ ಸಿಎಂ, ಈ ಯೋಜನೆಗಳ ಕುರಿತು ಮುಂಬರುವ ಅಧಿವೇಶನದಲ್ಲಿ ಸಂಪೂರ್ಣ ಉತ್ತರ ನೀಡಲಾಗುವುದು ಎಂದರು.

ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ : ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ಇವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೋ. ಸಿ ಎನ್​​ಆರ್ ರಾವ್ ಅವರ 10ನೇ ವರ್ಷದ ವಿಜ್ಞಾನ ವಿಸ್ಕೃತ ಕಾರ್ಯಕ್ರಮ-2025 ಹಾಗೂ ಶ್ರೀ ಬಿ. ಎಸ್. ಪಾಟೀಲ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಚಂದನ ಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು : ಮೌಢ್ಯ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದೆವು. ಬಸವಣ್ಣನವರ ನಾಡಿನಲ್ಲಿ ಹುಟ್ಟಿದ ನಾವು ಇಂದಿಗೂ ಕೂಡ ಮೌಢ್ಯಗಳನ್ನು ಆಚರಿಸುತ್ತಿರುವುದು ದುರ್ದೈವದ ಸಂಗತಿ. ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಭ್ರಾತೃತ್ವ, ಸ್ವಾತಂತ್ರ್ಯ , ಸಮಾನತೆಗಳನ್ನು ಸಂವಿಧಾನ ತಿಳಿಸಿದ್ದು, ಇದು ಅಕ್ಷರಶ: ಜಾರಿಯಾಗದೆ ಜಾತಿ ವ್ಯವಸ್ಥೆಯಾಗಲಿ, ಅಸಮಾನತೆಯಾಗಲಿ ಹೋಗುವುದಿಲ್ಲ. ಮಾನವರಾಗಿ ವ್ಯಕ್ತಿತ್ವವನ್ನು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ