Breaking News

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ

Spread the love

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ
140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ; ಸಿಎಂ ಸಿದ್ಧರಾಮಯ್ಯ
ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ; ಸಿಎಂ ಸಿದ್ದರಾಮಯ್ಯ
2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಸದಸ್ಯ ರಂಗನಾಥ್ ಅವರು ಮಧುಗಿರಿಯ ಅಭಿವೃದ್ಧಿಯಲ್ಲಿ ವಿಷಯದಲ್ಲಿರುವ ತಾರತಮ್ಯ ಸರಿಪಡಿಸಬೇಕೆಂದು ಹೇಳಿದರು. ಇದಕ್ಕೆ ಸಿಎಂ ಮುಂದಿನ ವರ್ಷ ತಾರತಮ್ಯ ನೀಗಿಸುವುದಾಗಿ ತಿಳಿಸಿದರು. ಇನ್ನು ವಿಪಕ್ಷ ನಾಯಕ ಆರ್. ಅಶೋಕ್ ಅವರು, 5 ವರ್ಷ ಅಧಿಕಾರದಲ್ಲಿರುತ್ತೀರಾ ಎಂದು ಪ್ರಶ್ನಿಸಿದರು.
ಈ ವೇಳೆ ಮಾತನಾಡಿದ ಸಿಎಂ ಗಾದೆ ಮಾತೆನಂತೆ ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು.
ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ.
ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು. 2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಬಿಜೆಪಿಗರು 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ