ವಿಜಯಪುರ ಜಿಲ್ಲೆಯ ಮುಳವಾಡ ಹಾಗೂ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ – ಸಚಿವ ಎಂ.ಬಿ. ಪಾಟೀಲ
ರಾಜ್ಯದಲ್ಲಿ ಸಮತೋಲಿತ ಹಾಗೂ ಭವಿಷ್ಯಮುಖಿ ಕೈಗಾರಿಕಾ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರ ಕ್ರಮ ಕೈಗೊಂಡಿದ್ದು, ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿ ಹಾಗೂ ದೀರ್ಘಕಾಲೀನ ಆರ್ಥಿಕ ಬೆಳವಣಿಗೆಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯ ಮುಳವಾಡದಲ್ಲಿ 200 ಎಕರೆ ವಿಸ್ತೀರ್ಣದಲ್ಲಿ ಹಾಗೂ ಮಂಗಳೂರಿನಲ್ಲಿ ಅತ್ಯಾಧುನಿಕ ಪ್ಲಾಸ್ಟಿಕ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು.
ಈ ಮೂಲಕ ವೇಗವಾಗಿ ಬೆಳೆಯುತ್ತಿರುವ ಪ್ಲಾಸ್ಟಿಕ್ ಕೈಗಾರಿಕಾ ವಲಯದಲ್ಲಿ ಹೂಡಿಕೆ, ಸಂಶೋಧನೆ ಹಾಗೂ ಉದ್ಯೋಗಾವಕಾಶಗಳಿಗೆ ಉತ್ತೇಜನ ನೀಡುವ ಉದ್ದೇಶ ಸರ್ಕಾರದ್ದಾಗಿದೆ ಎಂದು ಅವರು ಹೇಳಿದರು.
ಪ್ಲಾಸ್ಟಿಕ್ ಪಾರ್ಕ್‌ಗಳ ಸ್ಥಾಪನೆಯಿಂದ ಸ್ಥಳೀಯ ಯುವಜನರಿಗೆ ಉದ್ಯೋಗ ಸಿಗಲಿದ್ದು, ಕೈಗಾರಿಕಾ ಚಟುವಟಿಕೆಗಳು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಮಾನವಾಗಿ ವಿಸ್ತರಿಸಲಿವೆ.
ಇದರೊಂದಿಗೆ ಸಮಗ್ರ ಕರ್ನಾಟಕದಲ್ಲಿ ಕೈಗಾರಿಕಾ ಸ್ಥಾಪನೆಗಳು ನಿರಂತರವಾಗಿ ನಡೆಯುತ್ತಿದ್ದು, ರಾಜ್ಯದ ಆರ್ಥಿಕತೆಗೆ ಹೊಸ ಶಕ್ತಿ ತುಂಬುತ್ತಿದೆ ಎಂದು ಸಚಿವರು ಹೇಳಿದರು.
Laxmi News 24×7